ಶುಕ್ರವಾರ, ಜನವರಿ 22, 2021
24 °C

ನಟಿ ಸಂಜನಾ ಜಾಮೀನು ಅರ್ಜಿ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಬಂಧನದಲ್ಲಿರುವ ನಟಿ ಸಂಜನಾ ಗಲ್ರಾನಿ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌, ಆದೇಶವನ್ನು ಡಿ.7ಕ್ಕೆ ಕಾಯ್ದಿರಿಸಿದೆ.

 ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‌ಕುಮಾರ್ ಅವರಿದ್ದ ಪೀಠ ವಿಚಾರಣೆ ನಡೆಸಿತು. ‘ಸಂಜನಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. 2018ರಲ್ಲಿ ಸರ್ಜರಿಗೂ ಒಳಗಾಗಿದ್ದು, 2019ರಿಂದ ಆಸ್ತಮಾ ಹಾಗೂ ಉಸಿರಾಟದ ತೊಂದರೆ ಎದುರಿಸುತ್ತಿದ್ದಾರೆ. ಚಳಿಗಾಲದಲ್ಲಿ ಸಮಸ್ಯೆ ತೀವ್ರವಾಗುವ ಕಾರಣ, ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ. ಹೀಗಾಗಿ ಜಾಮೀನು ನೀಡಬೇಕು’ ಎಂದು ವಕೀಲ ಅಸ್ಮತ್ ಪಾಷಾ ಮನವಿ ಮಾಡಿದರು.

‘ಅನಾರೋಗ್ಯದ ನೆಪಕ್ಕೆ ಜಾಮೀನು ನೀಡಿದರೆ ತನಿಖೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ’ ಎಂದು ಸರ್ಕಾರದ ಪರ ವಕೀಲ ವೀರಣ್ಣ ತಿಗಡಿ ವಾದ ಮಂಡಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು