ಸೋಮವಾರ, ಆಗಸ್ಟ್ 15, 2022
20 °C

ಸಂಜನಾಗೆ ಬಲವಂತವಾಗಿ ಮತಾಂತರ: ವಕೀಲರೊಬ್ಬರಿಂದ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಟಿ ಸಂಜನಾ ಗಲ್ರಾನಿ ಅವರನ್ನು ಬಲವಂತವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿದ್ದಾರೆ ಎಂದು ಮೌಲ್ವಿಯೊಬ್ಬರ ವಿರುದ್ಧ ಕಾಟನ್‍ಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧಿತರಾಗಿದ್ದ ಸಂಜನಾ ಅವರು ಜಾಮೀನಿನ ಮೇಲೆ ಹೊರಬಂದಿದ್ದಾರೆ.

ಟ್ಯಾನರಿ ರಸ್ತೆಯ ದಾರುಲ್ ಉಲುಮ್ ಶಾ ವಲಿಯುಲ್ಲಾ ಮದರಸಾದ ಮೌಲ್ವಿಯೊಬ್ಬರ ವಿರುದ್ಧ ವಕೀಲ ಅಮೃತೇಶ್ ಎನ್ನುವವರು ದೂರು ನೀಡಿದ್ದಾರೆ.

'ಸಂಜನಾರನ್ನು ಒತ್ತಾಯಪೂರ್ವಕವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿದ್ದಾರೆ. ಸಂಜನಾ ಹೆಸರನ್ನು 'ಮಹಿರಾ' ಎಂದು ಬದಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ಕೋರಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸರು ಕಾನೂನು ತಜ್ಞರ ಸಲಹೆ ಪಡೆಯಲು ಮುಂದಾಗಿದ್ದಾರೆ.

ಡ್ರಗ್ಸ್ ಜಾಲ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿದ್ದ ಸಂಜನಾ, ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದರು. ಪ್ರಕರಣದ ಆರೋಪಿಯಾಗಿ ಬಂಧನಕ್ಕೆ ಒಳಗಾಗಿದ್ದಾಗ ಸಂಜನಾ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದ ಪತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು