ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚುವರಿ ಅಡ್ವೊಕೇಟ್‌ ಸ್ಥಾನಕ್ಕೆ ಎ.ಜಿ.ಪೊನ್ನಣ್ಣ ರಾಜೀನಾಮೆ

Last Updated 26 ಏಪ್ರಿಲ್ 2019, 19:49 IST
ಅಕ್ಷರ ಗಾತ್ರ

ಬೆಂಗಳೂರು: ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಎ.ಎಸ್‌.ಪೊನ್ನಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

‘ವೈಯಕ್ತಿಕ ಕಾರಣಗಳಿಗಾಗಿ ಈ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಇದೇ 15ರಂದು ರಾಜೀನಾಮೆ ಪತ್ರವನ್ನು ಅಡ್ವೊಕೇಟ್‌ ಜನರಲ್‌ ಅವರಿಗೆ ರವಾನಿಸಿದ್ದೇನೆ’ ಎಂದು ಪೊನ್ನಣ್ಣ ತಿಳಿಸಿದ್ದಾರೆ.

ಈ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಆಗಿ ನೇಮಕಗೊಂಡ ಪೊನ್ನಣ್ಣ ಅವರು, 2014ರ ಜುಲೈ 9ರಿಂದ ಕಾರ್ಯ ನಿರ್ವಹಿಸುತ್ತಿದ್ದರು. ಪ್ರಸಕ್ತ ಸರ್ಕಾರದಲ್ಲೂ ಅವರು ಎಎಜಿ ಆಗಿ ಮುಂದುವರಿದಿದ್ದರು.

ಇತ್ತೀಚೆಗಷ್ಟೇ ಅವರು ಹಿರಿಯ ವಕೀಲರಾಗಿ ನಿಯುಕ್ತಿಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT