ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಿಂದ ಅಪಾರ ಹಾನಿಯಾಗಿದೆ. ಸಾಕಷ್ಟು ಮನೆಗಳು ಕುಸಿದಿವೆ. ರಸ್ತೆಗಳು ಹಾಳಾಗಿವೆ. ಮರಗಳು ಬಿದ್ದು ವಿದ್ಯುತ್ ಕಂಬ, ತಂತಿ, ಪರಿವರ್ತಕಗಳು ಹಾಳಾಗಿವೆ. ಹೀಗಾಗಿ ಎನ್‌ಡಿಆರ್‌ಎಫ್ ಮಾನದಂಡದ ಅನ್ವಯ ನೆರವು ನಿಗದಿ ಮಾಡಿದರೆ, ಸಮರ್ಪಕವಾಗಿ ಪರಿಹಾರ ಕಾರ್ಯವನ್ನು ಕೈಗೊಳ್ಳಲು ಸಾಧ್ಯವಾಗುವುದಿಲ್ಲ. ಆದ್ದರಿಂದ, ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ, ಹೆಚ್ಚುವರಿ ಅನುದಾನ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಗೆ ಮನವಿ ಸಲ್ಲಿಸಿರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.