ಬೆಂಗಳೂರು: ಕರ್ನಾಟಕ ಹಾಲು ಉತ್ಪಾದಕರ ಮಹಾ ಮಂಡಳದ (ಕೆಎಂಎಫ್) ಆಡಳಿತ ಮಂಡಳಿಯ ಅಧಿಕಾರ ಅವಧಿ ಕೊನೆಗೊಂಡ ಬೆನ್ನಲ್ಲೇ, ಸಹಕಾರ ಸಂಘಗಳ ರಿಜಿಸ್ಟ್ರಾರ್ ಟಿ.ಎಚ್.ಎಂ.ಕುಮಾರ್ ಅವರನ್ನು ಆರು ತಿಂಗಳ ಅವಧಿಗೆ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಆಡಳಿತಾಧಿಕಾರಿ ಅಧಿಕಾರ ವಹಿಸಿಕೊಂಡ ಬಳಿಕ ಮಹಾಮಂಡಳದ ಆಡಳಿತ ಮಂಡಳಿಗೆ ಚುನಾವಣೆ ನಡೆಸಿ, ಚುನಾಯಿತ ಆಡಳಿತ ಮಂಡಳಿಗೆ ಅಧಿಕಾರ ಹಸ್ತಾಂತರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೆಎಂಎಫ್ನ ಹಾಲಿ ಆಡಳಿತ ಮಂಡಳಿಯ ಅವಧಿ 2024ರ ಜುಲೈ 7ಕ್ಕೆ ಮುಕ್ತಾಯಗೊಂಡಿತ್ತು. ಆದರೆ, ಲೋಕಸಭಾ ಚುನಾವಣೆ ಎದುರಾಗಿದ್ದರಿಂದಾಗಿ, ಆಡಳಿತಾಧಿಕಾರಿ ನೇಮಕ ಮಾಡದೆ ಹಾಲಿ ಆಡಳಿತ ಮಂಡಳಿಯನ್ನೆ ಮುಂದುವರಿಸಲಾಗಿತ್ತು. ಹಗರಿಬೊಮ್ಮನಹಳ್ಳಿಯ ಮಾಜಿ ಶಾಸಕ ಭೀಮಾನಾಯ್ಕ ಕೆಎಂಎಫ್ ಅಧ್ಯಕ್ಷರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.