ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಭಜಕಗಳ ಅಸಮರ್ಪಕ ನಿರ್ವಹಣೆ: ಬಿಬಿಎಂಪಿ ಆಡಳಿತಾಧಿಕಾರಿ ಅಸಮಾಧಾನ

Last Updated 30 ನವೆಂಬರ್ 2020, 22:32 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ರಸ್ತೆ ವಿಭಜಕಗಳಲ್ಲಿರುವ ಗಿಡಗಳ ನಿರ್ವಹಣೆ ಸಮರ್ಪಕವಾಗಿ ಮಾಡುತ್ತಿಲ್ಲ ಎಂದು ಬಿಬಿಎಂಪಿ ಆಡಳಿತಾಧಿಕಾರಿ ಗೌರವ ಗುಪ್ತ ಅಸಮಧಾನ ವ್ಯಕ್ತಪಡಿಸಿದರು.

ಹೊರವರ್ತುಲ ರಸ್ತೆ ಹಾಗೂ ಪ್ರಮುಖ ರಸ್ತೆಗಳ ಇಕ್ಕೆಲಗಳಲ್ಲಿ ಮತ್ತು ಪ್ರಮುಖ ವೃತ್ತಗಳಲ್ಲಿ ಗಿಡಗಳನ್ನು ಬೆಳೆಸಿ ನಗರವು ಸುಂದರವಾಗಿ ಕಾಣುವಂತೆ ಮಾಡಬೇಕು ಎಂದು ಎರಡು ತಿಂಗಳ ಗಡುವು ವಿಧಿಸಿದರು.

ತೋಟಗಾರಿಕೆ ಹಾಗೂ ಅರಣ್ಯ ವಿಭಾಗದ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಪ್ರಮುಖ ರಸ್ತೆಗಳು ಹಾಗೂ ವೃತ್ತಗಳ ಸಮೀಪದ ಮರಗಳ ಕೊಂಬೆಗಳನ್ನು ಕತ್ತರಿಸಬೇಕು. ಉದ್ಯಾನಗಳನ್ನು ಚೆನ್ನಾಗಿ ನಿರ್ವಹಣೆ ಮಾಡಬೇಕು. ಉದ್ಯಾನಕ್ಕೆ ವಾಯುವಿಹಾರಕ್ಕೆ ಬರುವವರಿಗೆ ಅನುಕೂಲ ಕಲ್ಪಿಸಬೇಕು’ ಎಂದು ಸೂಚಿಸಿದರು.

ಅರಣ್ಯ ವಿಭಾಗವು ಎಲ್ಲೆಲ್ಲೆ ಸಸಿಗಳನ್ನು ನೆಡುತ್ತಿದೆ, ಟ್ರೀ ಪಾರ್ಕ್‌ಗಳನ್ನು ಎಲ್ಲೆಲ್ಲಿ ಅಭಿವೃದ್ಧಿಪಡಿಸುತ್ತಿದೆ ಎಂದು ಮಾಹಿತಿ ಪಡೆದರು.

ವಿಶೇಷ ಆಯುಕ್ತ ಜೆ.ಮಂಜುನಾಥ್, ಉಪ ಅರಣ್ಯ ಸಂರಕ್ಷಣಾಧಿಕಾರಿ ರಂಗನಾಥ ಸ್ವಾಮಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT