ಸೋಮವಾರ, ಮೇ 23, 2022
30 °C

ಸರಣಿ ಅಪಘಾತ: ಸೈಕಲ್ ಸವಾರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹೊಸೂರು ರಸ್ತೆಯಲ್ಲಿ ಗುರುವಾರ ರಾತ್ರಿ ಅಪಘಾತ ಸಂಭವಿಸಿದ್ದು, ಸೈಕಲ್ ಸವಾರ ತಪನ್‌ಕಾಂತಿ ದೇಬನಾಥ್ (46)  ಮೃತಪಟ್ಟಿದ್ದಾರೆ.

‘ಪಶ್ಚಿಮ ಬಂಗಾಳದ ತಪನ್‌ಕಾಂತಿ, ಬೊಮ್ಮನಹಳ್ಳಿ ಬಳಿಯ ಹೋಟೆಲೊಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದರು. ಗುರುವಾರ ರಾತ್ರಿ ಸೈಕಲ್‌ನಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಸಂಚಾರ ವಿಭಾಗದ (ಪೂರ್ವ) ಡಿಸಿಪಿ ಕೆ.ಎಂ. ಶಾಂತರಾಜು ಹೇಳಿದರು.

‘ಆಡುಗೋಡಿ ಠಾಣೆ ಸಮೀಪ ಮುಖ್ಯರಸ್ತೆಯಲ್ಲಿ ಹೊರಟಿದ್ದ ಕಾರೊಂದು, ಬೈಕ್‌ಗೆ ಡಿಕ್ಕಿ ಹೊಡೆದಿತ್ತು. ನಂತರ, ಸೈಕಲ್‌ಗೆ ಗುದ್ದಿತ್ತು. ತಲೆ ಹಾಗೂ ದೇಹದ ಹಲವು ಭಾಗಗಳಿಗೆ ಪೆಟ್ಟು ಬಿದ್ದಿದ್ದರಿಂದ ಸೈಕಲ್ ಸವಾರ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿ ಮೂವರು ಹೊರಟಿದ್ದರು. ಅವರಿಗೂ ಗಾಯಗಾಗಿದ್ದು, ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದೂ ತಿಳಿಸಿದರು.

‘ಜಯಂತ್ (21) ಎಂಬುವರು ಕಾರು ಚಲಾಯಿಸುತ್ತಿದ್ದರು. ಅವರ ನಿರ್ಲಕ್ಷ್ಯ ಹಾಗೂ ಅತಿವೇಗದ ಚಾಲನೆಯಿಂದ ಅಪಘಾತ ಸಂಭವಿಸಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದೂ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.