ಮಂಗಳವಾರ, ಜುಲೈ 27, 2021
24 °C
ಲಾಕ್‌ಡೌನ್‌ ಸಂತ್ರಸ್ತರಿಗೆ, ಬೀದಿ ನಾಯಿಗಳಿಗೆ ಆಹಾರ ವಿತರಣೆ

ಬಡಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡಿದ ವಕೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನೆಲಮಂಗಲ: ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದ ಬಡವರು, ಕೂಲಿ ಕಾರ್ಮಿಕರಿಗೆ ಹೈಕೋರ್ಟ್‌ ವಕೀಲ ಎಚ್. ವೆಂಕಟೇಶ್ ದೊಡ್ಡೇರಿ ನೆರವು ನೀಡಿದ್ದಾರೆ.

ಹೈಕೋಟ್‌ನ ಲೀಗಲ್ ಸಮಿತಿಯ ಸದಸ್ಯರೂ ಆಗಿರುವ ಅವರು, ಲಾಕ್‌ಡೌನ್‌ ಸಂದರ್ಭದಲ್ಲಿ ಕೂಲಿ ಕಾರ್ಮಿಕರು ಹಾಗೂ ಬಡ ಕುಟುಂಬಗಳಿಗೆ ನಿರಂತರವಾಗಿ ಆಹಾರ ಸಾಮಗ್ರಿ ಒದಗಿಸಿದ್ದಾರೆ. ಬೀದಿನಾಯಿಗಳಿಗೂ ನಿತ್ಯ ಆಹಾರ ನೀಡಿದ್ದಾರೆ. ಪ್ರತಿಷ್ಠಿತ ಆಸ್ಪತ್ರೆಯಿಂದ ತಜ್ಞ ವೈದ್ಯರನ್ನು ಕರೆಸಿ, ಕೊರೊನಾ ಸೋಂಕು ಹರಡುವುದನ್ನು ತಡೆಯಲು ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ.

ನೆಲಮಂಗಲ ತಾಲ್ಲೂಕಿನ ದೊಡ್ಡೇರಿ ಗ್ರಾಮದ ವೆಂಕಟೇಶ್, ರೋಟರಿ ಕ್ಲಬ್ ಯಶವಂತಪುರ ಘಟಕದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಅಗತ್ಯವಿರುವವರಿಗೆ ಉಚಿತವಾಗಿ ಕಾನೂನು ಸಲಹೆ ನೀಡುತ್ತಾರೆ. ನೂರಾರು ಬಡಮಕ್ಕಳಿಗೆ ಮಾರ್ಗದರ್ಶನ ನೀಡುವುದರ ಜೊತೆಗೆ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವನ್ನೂ ನೀಡುತ್ತಿದ್ದಾರೆ. 

‘ಪ್ರತಿಭಾವಂತ ಬಡಮಕ್ಕಳ ವಿದ್ಯಾಭ್ಯಾಸಕ್ಕೆ ಹಣದ ಕೊರತೆ ಬರಬಾರದು ಎಂಬುದೇ ನನ್ನ ಉದ್ದೇಶ. ಇದು ಸಂವಿಧಾನದ ಆಶಯ ಕೂಡ’ ಎನ್ನುತ್ತಾರೆ ವೆಂಕಟೇಶ ದೊಡ್ಡೇರಿ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು