ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ.25ಕ್ಕೆ ಪೊಲೀಸ್ ಕಮಿಷನರ್ ಕಚೇರಿಗೆ ಮುತ್ತಿಗೆ

Last Updated 23 ಫೆಬ್ರುವರಿ 2022, 18:09 IST
ಅಕ್ಷರ ಗಾತ್ರ

ಬೆಂಗಳೂರು: ‘ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದ ವಕೀಲ ಜಗದೀಶ್‌ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಇದೇ 25ರಂದು ನಗರ ಪೊಲೀಸ್ ಕಮಿಷನರ್‌ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ’ ಎಂದು ವಕೀಲ ಎ.ಪಿ.ರಂಗನಾಥ್ ಹೇಳಿದರು.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಜಗದೀಶ್ ವಿರುದ್ಧ ಹಾಕಿರುವಕೊಲೆ ಯತ್ನ (ಐಪಿಸಿ 307) ಆರೋಪದಲ್ಲಿ ಯಾವುದೇ ಹುರುಳಿಲ್ಲ. ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದ ಅವರನ್ನು ದಮನ ಮಾಡಲು ಕಾಣದ ಹಲವರ ಕೈಗಳು ಒಗ್ಗೂಡಿ ಕೆಲಸ ಮಾಡುತ್ತಿವೆ. ವಕೀಲ ಜಗದೀಶ್ ಅವರನ್ನು ಕೂಡಲೇ ಬಂಧನದಿಂದ ಮುಕ್ತಗೊಳಿಸಿ, ಅವರ ವಿರುದ್ಧ ಹಾಕಿರುವ ಸುಳ್ಳು ಪ್ರಕರಣಗಳನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.

‘ಫೆ.25ರಂದು ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಮುಂಭಾಗ ಇರುವ ಬಿ.ಆರ್.ಅಂಬೇಡ್ಕರ್ ಪ್ರತಿಮೆಯಿಂದ ಮೆರವಣಿಗೆ ನಡೆಸಲಿದ್ದೇವೆ. ಅಲ್ಲಿಂದ ಹೊರಟು ಪೊಲೀಸ್ ಕಮಿಷನರ್‌ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ. ಇದಕ್ಕಾಗಿ ‘ಭ್ರಷ್ಟಾಚಾರದ ವಿರುದ್ಧ ನಾವು’ ಎಂಬ ವೇದಿಕೆ ರೂಪಿಸಿದ್ದು, ವಕೀಲರ ಸಂಘಟನೆಗಳು, ಕೆಆರ್‌ಎಸ್‌ ಪಕ್ಷ, ಕನ್ನಡಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಭಾಗವಹಿಸಲಿವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT