ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಏರೋ ಇಂಡಿಯಾ 2019': ವಿಂಗ್‌ ಕಮಾಂಡರ್‌ ಸಾಹಿಲ್‌ ಗಾಂಧಿಗೆ ಶ್ರದ್ಧಾಂಜಲಿ 

Last Updated 20 ಫೆಬ್ರುವರಿ 2019, 4:14 IST
ಅಕ್ಷರ ಗಾತ್ರ

ಬೆಂಗಳೂರು: ಮಂಗಳವಾರ ಸೂರ್ಯ ಕಿರಣ್‌ ಯುದ್ಧ ವಿಮಾನ ದುರಂತದಲ್ಲಿ ಮೃತಪಟ್ಟ ವಿಂಗ್ ಕಮಾಂಡರ್ ಸಾಹಿಲ್ ಗಾಂಧಿ ಆತ್ಮಕ್ಕೆ ಶಾಂತಿ ಕೋರಿ 'ಏರೋ ಇಂಡಿಯಾ 2019' ಉದ್ಘಾಟನಾ ಸಮಾರಂಭದಲ್ಲಿ ಎರಡು ನಿಮಿಷ ಮೌನಾಚರಿಸಲಾಯಿತು.

ವಿಂಗ್ ಕಮಾಂಡರ್ ಸಾಹಿಲ್ ಗಾಂಧಿ ನಿಧನಕ್ಕೆ ಸಿಎಂ ಕುಮಾರಸ್ವಾಮಿ ಸಂತಾಪ ಸೂಚಿಸಿ ಮಾತನಾಡಿದರು.

ಕರ್ನಾಟಕವು ಆರ್ಥಿಕ ಅಭಿವೃದ್ಧಿಯಲ್ಲಿ ದೇಶದಲ್ಲಿ ಮುಂಚೂಣಿಯಲ್ಲಿದೆ. ಉದ್ಯೋಗಾವಕಾಶ ಸೃಷ್ಟಿ, ಮಧ್ಯಮವರ್ಗದ ಏಳಿಗೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಹೂಡಿಕೆ ಸೆಳೆಯಲು ಹಲವು ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ಹಮ್ಮಿಕೊಂಡಿದೆ. ನಂ.1 ಡಿಜಿಟಲ್ ಸಿಟಿ ಎಂಬ ಹೆಗ್ಗಳಿಕೆಗೆ ಬೆಂಗಳೂರು ಈಚೆಗೆ ಪಾತ್ರವಾಗಿದೆ ಎಂದರು.

ಏರೋಸ್ಪೇಸ್ ಇಂಡಸ್ಟ್ರೀಗೆ ಕರ್ನಾಟಕದಲ್ಲಿ ಉತ್ತಮ ಅವಕಾಶವಿದೆ ಎಂದು ರಾಜ್ಯಕ್ಕೆ ಹೂಡಿಕೆದಾರರನ್ನು ಸೆಳೆಯುವ ಪ್ರಯತ್ನ ಮಾಡಿದರು.

ವಿಮಾನಯಾನ ಸಚಿವ ಸುರೇಶ್‌ ಪ್ರಭು ಮಾತನಾಡಿ, ’ದೇಶದಲ್ಲಿ ವಿಮಾನ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದೆ. ಉಡಾನ್ ಯೋಜನೆಯ ಫಲವಾಗಿ ಜನ ಸಾಮಾನ್ಯರೂ ವಿಮಾನದಲ್ಲಿ ಪ್ರಯಾಣಿಸುವಂತಾಗಿದೆ. ₹10 ಸಾವಿರ ಕೋಟಿ ವೆಚ್ಚದಲ್ಲಿ ದೇಶದಲ್ಲಿ ಇನ್ನೂ 100 ವಿಮಾನ ನಿಲ್ದಾಣಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ’ ಎಂದು ಹೇಳಿದರು.

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ 'ಏರೋ ಇಂಡಿಯಾ 2019'ಕ್ಕೆ ಚಾಲನೆ ನೀಡಲಿದ್ದಾರೆ.

(ಮಂಗಳವಾರ ನಡೆದ ದುರಂತದಿಂದಾಗಿ ವೈಮಾನಿಕ ಪ್ರದರ್ಶನದಿಂದ ದೂರ ಉಳಿದ ಸೂರ್ಯ ಕಿರಣ್‌ ಯುದ್ಧ ವಿಮಾನಗಳು)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT