ಏರೋ ಇಂಡಿಯಾ: ಮಾಂಸಾಹಾರ ಮಾರಾಟ ನಿರ್ಬಂಧ

ಬೆಂಗಳೂರು: ನಗರದಲ್ಲಿ ನಡೆಯುವ ಏರೋ ಇಂಡಿಯಾ ವೈಮಾನಿಕ ವಸ್ತು ಪ್ರದರ್ಶನದ ಹಿನ್ನೆಲೆಯಲ್ಲಿ ಯಲಹಂಕ ವಾಯುನೆಲೆ ಸುತ್ತಮುತ್ತಲಿನ ಪ್ರದೇಶದಲ್ಲಿ ಮಾಂಸ–ಮಾಂಸಾಹಾರ ಮಾರಾಟ ನಿರ್ಬಂಧಿಸಲಾಗಿದೆ. ಹೋಟೆಲ್, ಢಾಬಾಗಳಲ್ಲಿ ಮಾಂಸಾಹಾರ ತಯಾರಿಸುವಂತಿಲ್ಲ. ಜ.30ರಿಂದ ಫೆ.20ರವರೆಗೆ ಇದು ಅನ್ವಯವಾಗಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.
‘ಏರೋ ಇಂಡಿಯಾಗೆ’ ಸಂಬಂಧಿಸಿದಂತೆ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗುತ್ತಿದೆ. ಶುಚಿತ್ವದ ಬಗ್ಗೆ ಹೆಚ್ಚು ನಿಗಾವಹಿಸಲಾಗಿದೆ. ಈ ಬಾರಿ 258 ಇ–ಶೌಚಾಲಯಗಳನ್ನು ಸ್ಥಾಪಿಸಲಾಗುತ್ತಿದೆ. ಯಲಹಂಕ ವಾಯುನೆಲೆಯ ಸುತ್ತಮುತ್ತಲಿನ ಎಲ್ಲ ಕೆರೆಗಳಲ್ಲಿ ಮೀನುಗಾರಿಕೆಯನ್ನು ಸ್ಥಗಿತಗೊಳಿಸಲಾಗುತ್ತದೆ’ ಎಂದು ತಿಳಿಸಿದರು.
‘ಲ್ಯಾಂಡ್ ಫಿಲ್‌ಗಳಲ್ಲಿ ರಾತ್ರಿ ಮಾತ್ರ ಕೆಲಸ ಮಾಡಿ ಮೇಲ್ಭಾಗದಲ್ಲಿ ಮಣ್ಣು ಹಾಕಿ ಮುಚ್ಚಲಾಗುತ್ತದೆ. ನಮ್ಮ ಯಲಹಂಕ ವಲಯದ ವತಿ ಯಿಂದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ’ ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.