ಸೋಮವಾರ, 2 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಏರೋನಿಕ್ಸ್' ಕಂಪನಿ ಎಂಡಿ, ಸಿಇಒ ಕೊಲೆ ಪ್ರಕರಣ: ಟಿಕ್‌ಟಾಕ್ ಸ್ಟಾರ್ ಸೇರಿ ಮೂವರ ಬಂಧನ

Published 12 ಜುಲೈ 2023, 4:52 IST
Last Updated 12 ಜುಲೈ 2023, 4:52 IST
ಅಕ್ಷರ ಗಾತ್ರ

ಬೆಂಗಳೂರು: ಏರೋನಿಕ್ಸ್‌ ಇಂಟರ್‌ನೆಟ್‌ ಕಂಪನಿ (ಏರೋನಿಕ್ಸ್‌ ಮೀಡಿಯಾ ಸಂಸ್ಥೆ) ವ್ಯವಸ್ಥಾಪಕ ನಿರ್ದೇಶಕ ಫಣೀಂದ್ರ ಸುಬ್ರಹ್ಮಣ್ಯ ಹಾಗೂ ಸಿಇಒ ವಿನುಕುಮಾರ್ ಅವರ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಅಮೃತಹಳ್ಳಿ ಪೊಲೀಸರು ಬುಧವಾರ‌ ಬೆಳಿಗ್ಗೆ ಬಂಧಿಸಿದ್ದಾರೆ.

ಇಬ್ಬರನ್ನು ತಲ್ವಾರ್‌ನಿಂದ ಕೊಚ್ಚಿ ಕೊಲೆ ಮಾಡಿ, ಕುಣಿಗಲ್‌ನಲ್ಲಿ ತಲೆಮರೆಸಿಕೊಂಡಿದ್ದರು. ಮೂವರನ್ನು ಬಂಧಿಸಿರುವ ಪೊಲೀಸರು ಬೆಂಗಳೂರಿಗೆ ಕರೆ ತರುತ್ತಿದ್ದಾರೆ.

ಬನ್ನೇರುಘಟ್ಟ ರಸ್ತೆ ಚಿಕ್ಕನಹಳ್ಳಿ ನಿವಾಸಿ, ಟಿಕ್‌ಟಾಕ್ ಸ್ಟಾರ್ ಶಬರಿಷ್ ಅಲಿಯಾಸ್ ಫಿಲಿಕ್ಸ್‌ (27), ರೂಪೇನಾ ಅಗ್ರಹಾರದ ವಿನಯ್ ರೆಡ್ಡಿ (23) ಹಾಗೂ ಮಾರೇನಹಳ್ಳಿ ಸಂತು ಅಲಿಯಾಸ್ ಸಂತೋಷ್‌ ಬಂಧಿತ‌ ಆರೋಪಿಗಳು.

ವಿನಯ್ ರೆಡ್ಡಿ
ವಿನಯ್ ರೆಡ್ಡಿ
ಸಂತು ಅಲಿಯಾಸ್ ಸಂತೋಷ್‌
ಸಂತು ಅಲಿಯಾಸ್ ಸಂತೋಷ್‌

ಅಮೃತಹಳ್ಳಿಯ ಪಂಪ ಬಡಾವಣೆಯ 6ನೇ ಅಡ್ಡ ರಸ್ತೆಯಲ್ಲಿರುವ ಸಂಸ್ಥೆಯ ಕಚೇರಿಗೆ ಮಂಗಳವಾರ ಸಂಜೆ ನುಗ್ಗಿದ್ದ ಮೂವರು ಆರೋಪಿಗಳು ಕೊಲೆ ಮಾಡಿದ್ದರು.

ಕೊಲೆ ಮಾಡಿದ ಬಳಿಕ ಕಚೇರಿಯ ಹಿಂದಿನ ಬಾಗಿಲಿನ ಮೂಲಕ ಓಡಿ ಹೋಗಿದ್ದರು. ಕಚೇರಿಯ ಸಿಬ್ಬಂದಿಯೇ ಫಣೀಂದ್ರ ಹಾಗೂ ವಿನುಕುಮಾರ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT