ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಜೈಲಿನಿಂದ ಹೊರಬಂದು ಮನೆಗಳಲ್ಲಿ ಕಳ್ಳತನ; ಸಿಕ್ಕಿಬಿದ್ದ ಚೋರ

Last Updated 26 ನವೆಂಬರ್ 2021, 19:45 IST
ಅಕ್ಷರ ಗಾತ್ರ

ಬೆಂಗಳೂರು: ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಆರೋಪದಡಿ ಸುರೇಶ್ ಅಲಿಯಾಸ್ ಸೂರಿ (27) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

'ನಗರದ ಹಲವೆಡೆ 2008ರಿಂದಲೇ ಸುರೇಶ್ ಕೃತ್ಯ ಎಸಗಲಾರಂಭಿಸಿದ್ದ. ಅಪರಾಧ ಪ್ರಕರಣವೊಂದರಲ್ಲಿ ಜೈಲಿಗೆ ಹೋಗಿದ್ದ ಆತ, ಜಾಮೀನು ಮೇಲೆ ಹೊರಬಂದಿದ್ದ. ತನ್ನ ಹಳೇ ಚಾಳಿ ಮುಂದುವರಿಸಿದ್ದ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಠಾಣೆ ವ್ಯಾಪ್ತಿಯ ನಿವಾಸಿಯೊಬ್ಬರು ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸಮೇತ ಸೆ. 4ರಂದು ಬೇರೆ ಊರಿಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇಲ್ಲದ್ದನ್ನು ಖಾತ್ರಿಪಡಿಸಿಕೊಂಡು ಆರೋಪಿ ಕೃತ್ಯಕ್ಕೆ ಸಂಚು ರೂಪಿಸಿದ್ದ. ಮನೆಯ ಬೀಗ ಮುರಿದು ಒಳನುಗ್ಗಿದ್ದ ಆತ, ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿಗಳನ್ನು ಕದ್ದುಕೊಂಡು ಪರಾರಿಯಾಗಿದ್ದ. ಸೆ.6ರಂದು ದೂರುದಾರರು ತಮ್ಮ ಮನೆಗೆ ವಾಪಸು ಬಂದಾಗ ಕಳ್ಳತನ ಸಂಗತಿ ಗೊತ್ತಾಗಿತ್ತು’ ಎಂದೂ ತಿಳಿಸಿವೆ.

‘ಕಳ್ಳತನದ ಬಗ್ಗೆ ಪ್ರಕರಣ ದಾಖಲಿಸಿಕೊಂಡು, ಘಟನಾ ಸ್ಥಳದಲ್ಲಿ ಲಭ್ಯವಾಗಿದ್ದ ಬೆರಳಚ್ಚು ಮಾದರಿಗಳನ್ನು ಪರಿಶೀಲಿಸಲಾಯಿತು. ಜೈಲು ವಾಸ ಅನುಭವಿಸಿದ್ದ ಸುರೇಶ್ ಮೇಲೆ ಅನುಮಾನ ಬಂದಿತ್ತು. ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ತಪ್ಪೊಪ್ಪಿಕೊಂಡ’ ಎಂದೂ ಮೂಲಗಳು ಹೇಳಿವೆ.

‘ನಗರದ ಎಂಟು ಕಡೆಗಳಲ್ಲಿ ಆರೋಪಿ ಕೃತ್ಯ ಎಸಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನಿಂದ ₹ 28 ಲಕ್ಷ ಮೌಲ್ಯದ 534 ಗ್ರಾಂ ತೂಕದ ಚಿನ್ನಾಭರಣ ಹಾಗೂ 2 ಕೆ.ಜಿ 950 ಗ್ರಾಂ ಬೆಳ್ಳಿ ಸಾಮಗ್ರಿ ಜಪ್ತಿ ಮಾಡಲಾಗಿದೆ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT