ಗುರುವಾರ , ಜೂನ್ 4, 2020
27 °C
ಸಹಾಯವಾಣಿ ಆರಂಭ, ಗ್ರೀನ್‌ ಪಾಸ್‌ಗೆ ವ್ಯವಸ್ಥೆ

ರೈತರ ನೆರವಿಗೆ ‘ಅಗ್ರಿ ವಾರ್ ರೂಂ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕು ಹರಡುವ ಭೀತಿಯಿಂದಾಗಿ ಲಾಕ್‌ಡೌನ್ ಮಾಡಿದ್ದರಿಂದ ಕೃಷಿ ಪರಿಕರಗಳು ರೈತರಿಗೆ ಸಕಾಲದಲ್ಲಿ ದೊರಕುವಲ್ಲಿ ತೊಂದರೆಯಾಗಬಾರದು ಎಂಬ ಕಾರಣಕ್ಕೆ ‘ಅಗ್ರಿ ವಾರ್‌ ರೂಂ’ ಸ್ಥಾಪಿಸಲಾಗಿದ್ದು, ಸಹಾಯವಾಣಿಗಳನ್ನೂ ಆರಂಭಿಸಲಾಗಿದೆ.

ನಗರದಲ್ಲಿ ಮಂಗಳವಾರ ಕೃಷಿ ಸಚಿವ ಬಿ.ಸಿ.ಪಾಟೀಲ ಮತ್ತು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್ ಅವರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಈ ವಿಷಯ ಪ್ರಕಟಿಸಿದರು. ಕೃಷಿ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಅಗ್ರಿ ವಾರ್‌ ರೂಂ ಸ್ಥಾಪನೆಯಾಗಿದೆ.

ಬೆಳಿಗ್ಗೆ 8ರಿಂದ ರಾತ್ರಿ 8ರವರೆಗೆ ಕಾರ್ಯನಿರ್ವಹಿಸಲಿದೆ. ರೈತರು 08022212818, 08022210237 ಈ ಸಹಾಯವಾಣಿಗೆ ಕರೆ ಮಾಡಿದರೆ ಅಗತ್ಯ ಮಾಹಿತಿ ಲಭಿಸಲಿದೆ ಎಂದು ಸಚಿವರು ಮಾಹಿತಿ ನೀಡಿದರು.

ಗ್ರೀನ್‌ ಪಾಸ್‌: ಕೃಷಿ ಪರಿಕರ ಸಾಗಣೆ, ಮಳಿಗೆ ತೆರಯಲು ಅನುಕೂಲ ಮಾಡಿಕೊಡಲು ಅಗತ್ಯ ಇದ್ದವರಿಗೆ ಗ್ರೀನ್‌ ಪಾಸ್ ನೀಡುವಂತೆ ಜಂಟಿ ಕೃಷಿ ನಿರ್ದೇಶಕರಿಗೆ ಸೂಚಿಸಲಾಯಿತು. ಹಿಂಗಾರು/ ಬೇಸಿಗೆ ಹಂಗಾಮಿನಲ್ಲಿ ಬೆಳೆದ ಬೆಳೆಗಳ ಕೊಯ್ಲಿಗೆ ಸಂಬಂಧಿಸಿದ ಯಂತ್ರಗಳ ಸಾಗಣೆಗೆ ತೊಂದರೆಯಾಗುತ್ತಿದ್ದು, ನಿವಾರಿಸುವಂತೆ ತಿಳಿಸಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು