ಬೆಂಗಳೂರು: ‘ನಗರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಬಳಸುವ ಗ್ರಾಹಕರಿಗೆ ನಿಖರವಾದ ಬಿಲ್ ನೀಡಲು ಎ.ಐ(ಕೃತಕ ಬುದ್ಧಿಮತ್ತೆ) ಆಧಾರಿತ ಸ್ಮಾರ್ಟ್ ವಾಟರ್ ಮೀಟರ್ಗಳನ್ನು ಅಳವಡಿಸುವ ಬಗ್ಗೆ ಚಿಂತನೆ ನಡೆದಿದೆ’ ಎಂದು ಜಲಮಂಡಳಿಯ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.

ನವದೆಹಲಿಯಲ್ಲಿ ಮಂಗಳವಾರ ನಡೆದ ‘ಎ.ಐ ಇಂಪ್ಯಾಕ್ಟ್ ಶೃಂಗಸಭೆ-2026’ ರಲ್ಲಿ ಮಾಡೆಲ್ ಟೂ ಮಾಸಸ್ ಹವಾಮಾನ ವೈಪರೀತ್ಯ ಎದುರಿಸಲು ಎ.ಐ ಬಳಕೆ ಎಂಬ ಸಂವಾದದಲ್ಲಿ ಅವರು ಮಾತನಾಡಿದರು.

‘ನಗರದ ನೀರು ನಿರ್ವಹಣೆಯಲ್ಲಿ ಎ.ಐ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಬೆಂಗಳೂರು ಜಲಮಂಡಳಿಯು ಜಾಗತಿಕ ಮಟ್ಟದಲ್ಲಿ ಮಾದರಿಯಾಗಿ ಹೊರಹೊಮ್ಮಿದೆ. ನೀರು ಸರಬರಾಜು ವ್ಯವಸ್ಥೆಯ ಮೈಲಿಗಲ್ಲಾದ ಅತ್ಯಾಧುನಿಕ ‘ಎಐ ಸಮಗ್ರ ಸ್ಕಾಡಾ ನಿರ್ವಹಣಾ ವ್ಯವಸ್ಥೆ’ಯನ್ನು ಸದ್ಯದಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಲಿದ್ದಾರೆ’ ಎಂದು ತಿಳಿಸಿದರು.

‘ಪಂಪಿಂಗ್ ಸ್ಟೇಷನ್ಗಳು ಮತ್ತು ಎಸ್ಟಿಪಿಗಳಲ್ಲಿ ಎಐ ಆಧಾರಿತ ಪಂಪ್ಗಳನ್ನು ಅಳವಡಿಸುವ ಮೂಲಕ ಕಾರ್ಯಕ್ಷಮತೆಯನ್ನು ಹೆಚ್ಚಿಸಿದ್ದೇವೆ. ಇದರಿಂದ ವಾರ್ಷಿಕವಾಗಿ ₹40 ಕೋಟಿಗೂ ಅಧಿಕ ವಿದ್ಯುತ್ ವೆಚ್ಚವನ್ನು ಉಳಿತಾಯ ಮಾಡುತ್ತಿದ್ದೇವೆ. ಇದು ಕೇವಲ ಮಂಡಳಿಗೆ ಆರ್ಥಿಕ ಲಾಭವಷ್ಟೇ ಅಲ್ಲ, ಇಂಗಾಲದ ಹೊರಸೂಸುವಿಕೆಯನ್ನು ತಗ್ಗಿಸುವ ಮೂಲಕ ಪರಿಸರಕ್ಕೂ ದೊಡ್ಡ ಕೊಡುಗೆ ನೀಡಿದ್ದೇವೆ’ ಎಂದು ತಿಳಿಸಿದರು.

‘ನೀರಿನ ಸೋರಿಕೆ ಪತ್ತೆಹಚ್ಚಲು ಮತ್ತು ಅನಧಿಕೃತ ಸಂಪರ್ಕಗಳನ್ನು ನಿಖರವಾಗಿ ಗುರುತಿಸಲು ಎಐ ಚಾಲಿತ ರೋಬೋಟಿಕ್ಸ್ ಬಳಸುತ್ತಿದ್ದೇವೆ. ಮುಂಜಾಗ್ರತಾ ಕ್ರಮಗಳ ಮೂಲಕ ಸೋರಿಕೆಯಾಗುತ್ತಿದ್ದ ನೀರನ್ನು ಉಳಿಸಿ, ನಾಗರಿಕರಿಗೆ ತಲುಪಿಸಲು ಸಾಧ್ಯವಾಗುತ್ತಿದೆ’ ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.