ಬೆಂಗಳೂರು: ‘ಬುಡಕಟ್ಟು ಸಮುದಾಯದ ಮಕ್ಕಳಿಗೆ ಕೃತಕ ಬುದ್ದಿಮತ್ತೆ(ಎಐ) ತಂತ್ರಜ್ಞಾನ ಬಳಸಿಕೊಂಡು ಗುಣಮಟ್ಟದ ಶಿಕ್ಷಣವನ್ನು ನೀಡಲು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು’ ಎಂದು ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಎಂ. ಕನಗವಲ್ಲಿ ತಿಳಿಸಿದರು.

ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಭಾರತ ಸರ್ಕಾರ, ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ, ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ನಗರದಲ್ಲಿ ಆಯೋಜಿಸಿದ್ದ ಬುಡಕಟ್ಟು ಜನರ ಅಭಿವೃದ್ಧಿಯಲ್ಲಿ ಕೃತಕ ಬುದ್ಧಿಮತ್ತೆ ಬಳಕೆಯ ಬಗ್ಗೆ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

’ಎಸ್ಎಸ್ಎಲ್ಸಿ, ಪಿಯುಸಿ ಓದಿದ ಬುಡಕಟ್ಟು ಸಮುದಾಯದ ಯುವಕರಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ಕೊಡಿಸಬೇಕು, ವಿವಿಧ ತರಬೇತಿ ನೀಡಿ ಅವರನ್ನು ಸ್ವಾವಲಂಬಿಗಳನ್ನಾಗಿಸಿ ಸಮಾಜದ ಮುಖ್ಯವಾಹಿನಿಗೆ ತರಬಹುದು ಎಂಬುದರ ಬಗ್ಗೆ ಚಿಂತನೆ ಮಾಡಬೇಕು. ಬುಡಕಟ್ಟು ಜನರು ತಯಾರಿಸುವ ಜೇನು, ಬಿದಿರಿನ ಉತ್ಪನ್ನ, ಗಿಡಮೂಲಿಕೆಗಳಿಗೆ ಮಾರುಕಟ್ಟೆ ರೂಪಿಸಿ’ ಎಂದು ಹೇಳಿದರು.

ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಡಾ.ಡಿ.ಆರ್.ಅಶೋಕ್ ಮಾತನಾಡಿ, ಎ.ಐ. ತಂತ್ರಜ್ಞಾನ ಈಗ ಜೀವನದ ಎಲ್ಲಾ ರಂಗಗಳಲ್ಲೂ ವಿಸ್ತಾರವಾಗಿ ಬೆಳೆಯುತ್ತಿದೆ. ಇಲಾಖೆಯ ಕಾರ್ಯಕ್ಷಮತೆ ಹೆಚ್ಚಿಸಲು ಎ.ಐ. ಅನ್ನು ಬಳಸಿಕೊಳ್ಳಬೇಕು. ಏಕಲವ್ಯ ಶಾಲೆಗಳಲ್ಲಿ ಎಐ ಬಳಸಿ ಎಸ್ಎಸ್ಎಲ್ಸಿ, ಪಿಯುಸಿ ತರಗತಿಗಳಲ್ಲಿ ಪಾಠ ಮಾಡಲು ಹಾಗೂ ನೀಟ್, ಸಿ.ಇ.ಟಿ. ತರಬೇತಿ ಕೊಡಿಸಲು ಅನುಕೂಲವಾಗಿದೆ. ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿಸಬೇಕು ಎಂದರು.

ಕಾರ್ಯಾಗಾರದಲ್ಲಿ ಉಪಕಾರ್ಯದರ್ಶಿ ಜ್ಯೋತಿ, ಜಂಟಿ ನಿರ್ದೇಶಕ ರಾಜ್ಕುಮಾರ್, ಉಪನಿರ್ದೇಶಕ ಪ್ರಕಾಶ್, ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪನಿರ್ದೇಶಕಿ ಹೆಚ್.ಎಸ್. ಗಿರಿಜಾಂಬ, ಇಲಾಖೆ ಜಿಲ್ಲಾ ಅಧಿಕಾರಿಗಳಾದ ಎಂ.ಕೆ. ಮಲ್ಲೇಶ್, ಹೆಚ್.ಎಸ್. ಬಿಂದ್ಯಾ, ಬಸವರಾಜು, ನಾರಾಯಣಸ್ವಾಮಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.