ಭಾನುವಾರ, ಜೂನ್ 20, 2021
30 °C

ಬೆಂಗಳೂರು | ಕಾರ್ಮಿಕ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ವಾಪಸ್‌ಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸುಗ್ರೀವಾಜ್ಞೆ ಮೂಲಕ ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಆಲ್‌ ಇಂಡಿಯಾ  ಸೆಂಟ್ರಲ್ ಕೌನ್ಸಿಲ್ ಆಫ್‌ ಟ್ರೇಡ್ ಯೂನಿಯನ್(ಎಐಸಿಸಿಟಿಯು) ಖಂಡಿಸಿದೆ.

‘ಕೆಲಸದ ಅವಧಿ ದಿನಕ್ಕೆ 8 ಗಂಟೆ, ಕನಿಷ್ಠ ವೇತನ, ಪಿಂಚಣಿ ಮತ್ತು ಆರೋಗ್ಯ ಸೌಲಭ್ಯಗಳನ್ನು ತೆಗೆದು ಹಾಕಿರುವುದು ಕಾರ್ಮಿಕ ವಿರೋಧಿ ನೀತಿಯಾಗಿದೆ. 150 ವರ್ಷಗಳ ಹೋರಾಟದ ಫಲವಾಗಿ ಪಡೆದುಕೊಂಡಿರುವ ಹಕ್ಕುಗಳನ್ನು ಕಸಿದುಕೊಳ್ಳಲು ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಯಾವ ಹಕ್ಕಿದೆ’ ಎಂದು ಎಐಸಿಸಿಟಿಯು ಪ್ರಶ್ನಿಸಿದೆ.

‘ತಿದ್ದುಪಡಿ ಸುಗ್ರೀವಾಜ್ಞೆಯನ್ನು ಕೂಡಲೇ ಹಿಂಪಡೆಯಬೇಕು. ಕಾರ್ಮಿಕ ‍ಪರವಾದ ಕಾನೂನುಗಳನ್ನು ಮತ್ತಷ್ಟು ಬಲಪಡಿಸಬೇಕು’ ಎಂದು ಒತ್ತಾಯಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.