ಭಾನುವಾರ, ಅಕ್ಟೋಬರ್ 24, 2021
21 °C

ಎನ್‌ಇಪಿಯಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಅಂಧಕಾರ: ಅಜಯ್ ಕಾಮತ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆ ಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ಅಂಧಕಾರಕ್ಕೆ ತಳ್ಳಿದೆ’ ಎಂದು ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ದೂರಿದ್ದಾರೆ.

‘ಅಕ್ಟೋಬರ್‌ ಆದರೂ ಶೈಕ್ಷಣಿಕ ವರ್ಷ ಈವರೆಗೆ ಆರಂಭಗೊಂಡಿಲ್ಲ. ಎನ್‌ಇಪಿ ಆಧಾರದ ಮೇಲೆ ಈ ವರ್ಷದ ಪಠ್ಯಕ್ರಮ ಇನ್ನೂ ತಯಾರಿ ಆಗದಿರುವುದೇ ಇದಕ್ಕೆ ಕಾರಣ. ನೂತನ ಪಠ್ಯಪುಸ್ತಕಗಳ ಆಧಾರದ ಮೇಲೆ ಅಧ್ಯಾಪಕರಿಗೆ ಪಾಠ ಮಾಡಲು ತರಬೇತಿ ಇಲ್ಲ ಎಂದಾದರೆ, ಅವರು ಪಾಠ ಮಾಡುವುದಾದರೂ ಹೇಗೆ? ಎಂದು ಪ್ರಶ್ನಿಸಿದ್ದಾರೆ.

‘ಕಳೆದ ವರ್ಷಕ್ಕಿಂತ ಈ ಬಾರಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಹಾಗಾಗಿ, ಸರ್ಕಾರಿ ಕಾಲೇಜುಗಳ ಸಂಖ್ಯೆ ಏರಿಸಿ ಮೂಲ ಸೌಕರ್ಯಗಳನ್ನು ಹೆಚ್ಚಿಸಬೇಕು. ಕೂಡಲೇ ಎನ್‌ಇಪಿ ವಾಪಸ್ ಪಡೆದು, ಹಿಂದಿನ ಶೈಕ್ಷಣಿಕ ವ್ಯವಸ್ಥೆಯನ್ನು ಅನುಸರಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.