ಬೆಂಗಳೂರು: ಕೋಲ್ಕತ್ತದ ಆರ್. ಜಿ. ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ಸೋಮವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಎಐಡಿಎಸ್ಓ ನೇತೃತ್ವದಲ್ಲಿ ಮೋಂಬತ್ತಿ ಮೆರವಣಿಗೆ ನಡೆಸಲಾಯಿತು.
ದಿನದಿಂದ ದಿನಕ್ಕೆ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ತಿಂಗಳು ಆಂಧ್ರಪ್ರದೇಶದಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಲಾಗಿದೆ. ಆರ್.ಜಿ.ಕರ್ ಆಸ್ಪತ್ರೆಯಲ್ಲಿ ನಡೆದ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ ಎಂದು ಎಐಡಿಎಸ್‌ಒ ಕಾರ್ಯದರ್ಶಿ ಅಜಯ್ ಕಾಮತ್ ಆಕ್ರೋಶ ವ್ಯಕ್ತಪಡಿಸಿದರು.
ವೈದ್ಯಕೀಯ, ಎಂಜಿನಿಯರಿಂಗ್, ಪದವಿ ವಿದ್ಯಾರ್ಥಿಗಳು ಹಾಗೂ ಇಎಸ್ಐ ನಿವೃತ ಸರ್ಜನ್ ಡಾ. ಸುಧಾ ಕಾಮತ್, ಚಲನಚಿತ್ರ ನಿರ್ದೇಶಕ ಬಿ. ಸುರೇಶ, ಐಎಂಎ ಡಾ. ಜ್ಯೋತಿ, ಡಾ. ಗಂಗಾಧರ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.