ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಐಡಿಎಸ್‌ಒ: ವಿದ್ಯಾರ್ಥಿ ಪ್ರಣಾಳಿಕೆ ಬಿಡುಗಡೆ

Published 3 ಏಪ್ರಿಲ್ 2024, 15:40 IST
Last Updated 3 ಏಪ್ರಿಲ್ 2024, 15:40 IST
ಅಕ್ಷರ ಗಾತ್ರ

ಬೆಂಗಳೂರ: ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್‌ ಆರ್ಗನೈಸೇಷನ್ (ಎಐಡಿಎಸ್‌ಒ) ವಿದ್ಯಾರ್ಥಿಗಳ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಎಲ್ಲ ಪಕ್ಷಗಳು ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದೆ.

ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಡಿಎಸ್‌ಒ ಅಧ್ಯಕ್ಷೆ ಕೆ.ಎಸ್. ಅಶ್ವಿನಿ, ‘ರಾಜ್ಯದಲ್ಲಿ ಅಳವಡಿಸಿಕೊಂಡಿರುವ ರಾಷ್ಟ್ರೀಯ ಶಿಕ್ಷಣ ನೀತಿ–2020 (ಎನ್‌ಇಪಿ) ಹಿಂಪಡೆಯಬೇಕು. ಜನಪರ ಶಿಕ್ಷಣ ನೀತಿಯನ್ನು ರೂಪಿಸಿ ಜಾರಿಗೊಳಿಸಬೇಕು. ಕೇಂದ್ರದ ಬಜೆಟ್‌ನಲ್ಲಿ ಶಿಕ್ಷಣಕ್ಕಾಗಿ ಶೇ 10ರಷ್ಟು ರಾಜ್ಯ ಬಜೆಟ್‌ನಲ್ಲಿ ಶೇ 30ರಷ್ಟು ಅನುದಾನವನ್ನು ಮೀಸಲಿಡಬೇಕು. ವಿಲೀನದ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ನಿಲ್ಲಿಸಬೇಕು’ ಎಂದು ಒತ್ತಾಯಿಸಿದರು.

‘ಎಲ್ಲ ಸರ್ಕಾರಿ ಶಾಲಾ–ಕಾಲೇಜುಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಕಾಲ–ಕಾಲಕ್ಕೆ ಅನುದಾನ ಬಿಡುಗಡೆಗೊಳಿಸಬೇಕು. ಹೆಚ್ಚು ಸರ್ಕಾರಿ ಶಾಲೆಗಳನ್ನು ತೆರೆಯುವ ಮೂಲಕ ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಿ, ವಿದ್ಯಾರ್ಥಿನಿಲಯಗಳಿಗೆ ಸೌಲಭ್ಯ ಒದಗಿಸಬೇಕು. ಎಲ್ಲ ಅರ್ಹ ವಿದ್ಯಾರ್ಥಿಗಳಿಗೆ ಸರಿಯಾದ ಸಮಯದಲ್ಲಿ ವಿದ್ಯಾರ್ಥಿವೇತನ ಹಂಚಿಕೆಯಾಗಬೇಕು. ನಾಲ್ಕು ವರ್ಷಗಳ ಪದವಿ ಕೋರ್ಸ್‌ ಹಿಂಪಡೆದುಕೊಳ್ಳಬೇಕು. ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಪಾಸ್‌ ನೀಡಿ, ಪದವಿ ಮತ್ತು ಎಂಜಿನಿಯರಿಂಗ್‌ ಕಾಲೇಜುಗಳಲ್ಲಿನ ‌ಪ್ರವೇಶ ಶುಲ್ಕ ಹೆಚ್ಚಳಕ್ಕೆ ಕಡಿವಾಣ ಹಾಕಬೇಕು’ ಎಂದು ಹೇಳಿದರು.

‘ಪಠ್ಯಪುಸ್ತಕಗಳಲ್ಲಿ ನಮ್ಮ ದೇಶದ ನವೋದಯದ ಮಹಾನ್‌ ವ್ಯಕ್ತಿಗಳು ಹಾಗೂ ಕ್ರಾಂತಿಕಾರಿಗಳ ಜೀವನದ ಹೋರಾಟಗಳನ್ನು ಸೇರಿಸಬೇಕು. ನಮ್ಮ ದೇಶದಲ್ಲಿ ಖಾಸಗಿ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅವಕಾಶ ನೀಡಬಾರದು. ಖಾಲಿ ಇರುವ ಬೋಧಕ–ಬೋಧಕೇತರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕು. ಶಿಕ್ಷಣದ ಸ್ವ–ಹಣಕಾಸು ವ್ಯವಸ್ಥೆ ಉತ್ತೇಜಿಸುವುದನ್ನು ಸ್ಥಗಿತಗೊಳಿಸಬೇಕು’ ಎಂದರು.

‘ಎಲ್ಲ ಸರ್ಕಾರಿ ಕಾಲೇಜುಗಳಲ್ಲಿ ಎನ್‌ಇಇಟಿ, ಜೆಇಇ ಮೇನ್‌ ಮತ್ತು ಜೆಇಇ ಅಡ್ವಾನ್ಸ್‌ ಆಕಾಂಕ್ಷಿಗಳಿಗೆ ಉಚಿತ ಕೋಚಿಂಗ್‌ ನೀಡಬೇಕು. ಎಲ್ಲ ಜಿಲ್ಲೆಗಳಲ್ಲಿ ಎಂಜಿನಿಯರಿಂಗ್‌ ಕಾಲೇಜುಗಳನ್ನು ಸ್ಥಾಪಿಸಬೇಕು’ ಎಂದು ಆಗ್ರಹಿಸಿದರು.

ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಅಜಯ್‌ ಕಾಮತ್, ಅಭಯಾ ದಿವಾಕರ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT