ಬೆಂಗಳೂರು: ‘ರಾಜ್ಯದಲ್ಲಿ ಸದ್ಯ ಶೇ 20ರಷ್ಟು ಅರಣ್ಯ ಪ್ರದೇಶವಿದ್ದು, ಈ ಪ್ರಮಾಣವನ್ನು ಶೇ 30ಕ್ಕೆ ಹೆಚ್ಚಿಸಲು ಅರಣ್ಯ ಇಲಾಖೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ’ ಎಂದು ಅರಣ್ಯ ಸಚಿವ ಉಮೇಶ ಕತ್ತಿ ಹೇಳಿದರು.

67ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ನಗರದ ಕಬ್ಬನ್ ಪಾರ್ಕ್‌ನಲ್ಲಿ ಆಯೋಜಿಸಲಾಗಿದ್ದ ‘ವನ್ಯಜೀವಿ ಸಂರಕ್ಷಣೆಗಾಗಿ ನಡಿಗೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ವನ್ಯಜೀವಿಗಳ ಹಾಗೂ ಕಾಡಿನ ರಕ್ಷಣೆ ಬಗ್ಗೆ ನಮ್ಮಲ್ಲಿ ಹೆಚ್ಚಿನ ಜಾಗೃತಿ ಮೂಡಬೇಕಿದೆ’ ಎಂದರು.

‘ಕಾಡು ಉಳಿದರೆ ಮಾತ್ರ ನೆಮ್ಮದಿಯಿಂದ ಇರಲು ಸಾಧ್ಯ. ಕಾಡು ಕಾಪಾಡಿಕೊಂಡು ಹೋಗುವ ಜವಾಬ್ದಾರಿ ಎಲ್ಲರ ಮೇಲಿದೆ. ಕರ್ನಾಟಕವನ್ನು ದೇಶದಲ್ಲಿಯೇ ಅತೀ ಹೆಚ್ಚು ಅರಣ್ಯ ಪ್ರದೇಶ ಹೊಂದಿರುವ ರಾಜ್ಯವನ್ನಾಗಿ ರೂಪಿಸುವ ಗುರಿಯನ್ನು ಅರಣ್ಯ ಇಲಾಖೆ ಹೊಂದಿದೆ’ ಎಂದು ತಿಳಿಸಿದರು.

ಅಳಿವಿನ ಅಂಚಿನಲ್ಲಿರುವ ಮೀನಿನ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ವನ್ಯ
ಜೀವಿ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲು ಕಬ್ಬನ್ ಉದ್ಯಾನದಿಂದ ಲಾಲ್‌ಬಾಗ್‌ವರೆಗೆ ಏರ್ಪಡಿಸಿದ್ದ ನಡಿ
ಗೆಗೆ ಹಸಿರು ನಿಶಾನೆ ತೋರಿಸಲಾಯಿತು.

ಶಾಸಕ ರಿಜ್ವಾನ್ ಅರ್ಷದ್, ಸಂಸದ ಪಿ.ಸಿ. ಮೋಹನ್, ಅರಣ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂಜಯ್ ಮೋಹನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.