ಮಂಗಳವಾರ, ಆಗಸ್ಟ್ 3, 2021
27 °C

'ಪೌರಕಾರ್ಮಿಕರಿಗೆ ಇಎಸ್‍ಐ, ಪಿಂಚಣಿ ನೀಡಿ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪೌರಕಾರ್ಮಿಕರಿಗೆ ಇಎಸ್‍ಐ ಹಾಗೂ ಪಿಂಚಣಿ ಸೌಲಭ್ಯ ನೀಡಬೇಕು ಎಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‍ಎಸ್) ಒತ್ತಾಯಿಸಿದೆ.

'ಕೋವಿಡ್-19 ಸಂಕಷ್ಟದ ನಡುವೆಯೂ ಸೋಂಕು ತಡೆಯುವ ಉದ್ದೇಶದಿಂದ ಸ್ವಚ್ಛತಾ ಕಾರ್ಯಗಳಲ್ಲಿ ನಿರತರಾಗಿರುವ ಪೌರಕಾರ್ಮಿಕರಿಗೆ ಅಗತ್ಯ ಸುರಕ್ಷಾ ಸಾಮಗ್ರಿಗಳಿಲ್ಲ. ಜೀವ ಭದ್ರತೆಯೂ ಇಲ್ಲ. ನಗರದಲ್ಲಿ 23 ಮಂದಿಗೆ ಸೋಂಕು ತಗುಲಿರುವುದು ಇದಕ್ಕೆ ಸಾಕ್ಷಿ' ಎಂದು ಸಂಘಟನೆ ಬೆಂಗಳೂರು ನಗರ ಜಿಲ್ಲಾ ಸಮಿತಿ ಕಾರ್ಯದರ್ಶಿ ಎ.ಶಾಂತಾ ದೂರಿದ್ದಾರೆ.

'ಪೌರಕಾರ್ಮಿಕರ ಕುಟುಂಬಗಳಿಗೆ ಉಚಿತ ಆರೋಗ್ಯ ತಪಾಸಣೆ, ಸೋಂಕಿತರಿಗೆ ಉಚಿತ ಚಿಕಿತ್ಸೆ ಹಾಗೂ ಪೂರ್ಣ ವೇತನ ನೀಡಬೇಕು‘ ಎಂದು ಆಗ್ರಹಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು