ಭಾನುವಾರ, ಏಪ್ರಿಲ್ 11, 2021
25 °C

ನಿಷೇಧದ ನಡುವೆಯೂ ಮಾಂಸ ಮಾರಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಹಂಕ: ಭಾರತೀಯ ವಾಯುಪಡೆ ಕೇಂದ್ರದಲ್ಲಿ ಫೆ. 3ರಿಂದ 7ರವರೆಗೆ ಏರ್ ಷೋ ನಡೆಯಲಿದ್ದು, 10 ಕಿಲೋಮೀಟರ್ ವ್ಯಾಪ್ತಿಯಲ್ಲಿ ಜ.17 ರಿಂದ ಫೆ.9ರವರೆಗೆ ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ. ಆದರೆ, ಬಹುತೇಕ ಅಂಗಡಿಗಳಲ್ಲಿ ಭಾನುವಾರ ಮಾಂಸ ಮಾರಾಟ ಎಂದಿನಂತೆ ನಡೆಯಿತು.

ಮಾಂಸಾಹಾರಿ ಹೋಟೆಲ್‌ಗಳು, ರೆಸ್ಟೋರೆಂಟ್‌ ಹಾಗೂ ವಿವಿಧ ರೀತಿಯ ಮಾಂಸ ಮಾರಾಟದ ಅಂಗಡಿಗಳನ್ನು ತೆರೆಯಬಾರದೆಂದು ಬಿಬಿಎಂಪಿ ಯಲಹಂಕ ವಲಯದ ಜಂಟಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.

 ಬಿಬಿಎಂಪಿ ಪಶುಪಾಲನಾ ವಿಭಾಗದ ಜಾನುವಾರು ಅಧಿಕಾರಿ ಲಕ್ಷೀನಾರಾಯಣ, ‘ಬಾಗಲೂರು, ಮಾರುತಿನಗರ, ಅಟ್ಟೂರು ಬಡಾವಣೆ ಮತ್ತಿತರ ಕಡೆಗಳಲ್ಲಿ ದಾಳಿ ನಡೆಸಿದ್ದೇವೆ. ಮಾಂಸದ ಅಂಗಡಿಗಳನ್ನು ಮುಚ್ಚಿಸಿ, ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಕೆಲವು ಮಾಲೀಕರಿಗೆ ದಂಡ ವಿಧಿಸಲಾಗಿದೆ. ಅಗತ್ಯ ಸಿಬ್ಬಂದಿಯನ್ನು ಒದಗಿಸಿದರೆ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.

ಮಾಂಸಕ್ಕಾಗಿ ಹದ್ದು, ಕಾಗೆಗಳು ಈ ಪ್ರದೇಶದಲ್ಲಿ ಹಾರಾಡಿದರೆ ವಿಮಾನಗಳ ಹಾರಾಟಕ್ಕೆ ಅಡ್ಡಿಯಾಗಲಿದೆ ಎಂಬ ಉದ್ದೇಶದಿಂದ ಪಾಲಿಕೆ ಈ ಕ್ರಮ ಕೈಗೊಂಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು