ಸೋಮವಾರ, ಮೇ 17, 2021
23 °C

ಏರ್ ಷೋ: ವಾಣಿಜ್ಯ ವಿಮಾನ ಹಾರಾಟ ಭಾಗಶಃ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ಫೆ.3ರಿಂದ 5ರವರೆಗೆ ನಡೆಯಲಿರುವ ಏರೊ ಇಂಡಿಯಾ ವೈಮಾನಿಕ ಪ್ರದರ್ಶನದ ಸಂದರ್ಭದಲ್ಲಿ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ತನ್ನ ವಾಣಿಜ್ಯ ವಿಮಾನ ಹಾರಾಟ ಕಾರ್ಯಾಚರಣೆಯನ್ನು ಭಾಗಶಃ ನಿಲ್ಲಿಸಲು ನಿರ್ಧರಿಸಿದೆ.

ಸುರಕ್ಷತೆ ಮತ್ತು ಕಾರ್ಯಕ್ರಮದ ಯಶಸ್ವಿಗೆ ದಾರಿ ಮಾಡಿಕೊಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಏರೊ ಇಂಡಿಯಾ ಕಾರ್ಯಕ್ರಮದ ಅಭ್ಯಾಸ ಮತ್ತು ಪ್ರದರ್ಶನದ ದಿನಗಳಲ್ಲಿ ಪರ್ಯಾಯ ವಿಮಾನ ನಿಲ್ದಾಣವಾಗಿ ಕೂಡ ಸಜ್ಜಾಗಿರಲಿದೆ.

ಪ್ರಯಾಣಿಕರಿಗೆ ಅನನುಕೂಲ ಆಗುವುದನ್ನು ತಪ್ಪಿಸಲು ಬದಲಾದ ವೇಳಾಪಟ್ಟಿಯ ಮಾಹಿತಿಯನ್ನು ಕಾಲಕಾಲಕ್ಕೆ ನೀಡಲಾಗುತ್ತದೆ ಎಂದು ಬಿಐಎಎಲ್‌ (ಬೆಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ) ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು