ಮಂಗಳವಾರ, ಜೂನ್ 15, 2021
27 °C

ಹೊಸ ಶಿಕ್ಷಣ ನೀತಿ ಹಿಂಪಡೆಯುವಂತೆ ಎಐಎಸ್‍ಇಸಿ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೇಂದ್ರ ಸರ್ಕಾರ ತರಾತುರಿಯಲ್ಲಿ ಜಾರಿ ಮಾಡಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‍ಇಪಿ) ಕೂಡಲೇ ಹಿಂಪಡೆಯುವಂತೆ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು ಆಗ್ರಹಿಸಿದರು.

‘ಭಾರತದ ನವೋದಯದ ಚಿಂತಕರ ವಿಚಾರಗಳನ್ನು ಗಾಳಿಗೆ ತೂರಿ, ವೈಜ್ಞಾನಿಕ, ಪ್ರಜಾತಾಂತ್ರಿಕ ಹಾಗೂ ಧರ್ಮನಿರ
ಪೇಕ್ಷ ಚಿಂತನೆಗಳನ್ನು ನಾಶಗೊಳಿಸಲಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

ಸಮಿತಿಯು ಶನಿವಾರ ಹಮ್ಮಿಕೊಂಡಿದ್ದ ಆನ್‍ಲೈನ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರವು ಕೊರೊನಾ ಸಂದರ್ಭವನ್ನು ದುರುಪಯೋಗ ಮಾಡಿಕೊಂಡು, ಶಿಕ್ಷಣ ತಜ್ಞರು, ಪೋಷಕರೊಂದಿಗೆ ಚರ್ಚಿಸದೆ, ಶಿಕ್ಷಣ ವಿರೋಧಿ ನೀತಿ ಜಾರಿಗೊಳಿಸಿರುವುದು ಖಂಡನಾರ್ಹ' ಎಂದರು.

‘ನೀತಿಯು ಕ್ಷಣ ವ್ಯವಸ್ಥೆಯಲ್ಲಿ ಅತೀವ ಖಾಸಗೀಕರಣ ಹಾಗೂ ಶಿಕ್ಷಣದ ವ್ಯಾಪಾರೀಕರಣಕ್ಕೆ ಕಾರಣವಾಗಲಿದೆ. ಬಜೆಟ್‍ನಲ್ಲಿ ಶಿಕ್ಷಣಕ್ಕೆ ಮೀಸಲಿಡುತ್ತಿರುವ ಹಣಕಾಸಿನಲ್ಲಿ ಕುಸಿತ ಕಾಣಲಿದೆ. ಅಧಿಕಾರದಲ್ಲಿರುವ ಪಕ್ಷದ ಸಿದ್ಧಾಂತಕ್ಕೆ ಅನುಗುಣವಾಗಿ ಪಠ್ಯಕ್ರಮ ಬದಲಾಗುತ್ತಿವೆ' ಎಂದು ದೂರಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು