ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಟಿಎಸ್‌ಇ: ಆಕಾಶ್‌ ವಿದ್ಯಾಸಂಸ್ಥೆ ವಿದ್ಯಾರ್ಥಿನಿಗೆ ಮೊದಲ ರ‍್ಯಾಂಕ್

Last Updated 16 ಜೂನ್ 2021, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಷ್ಟೀಯ ಪ್ರತಿಭಾನ್ವೇಷಣೆ ಪರೀಕ್ಷೆಯ (ಎನ್‌ಟಿಎಸ್‌ಇ) ಮೊದಲ ಹಂತದಲ್ಲಿ ಆಕಾಶ್‌ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿ, ನಗರದ ರಿಧಿ ಅಗರ್‌ವಾಲ್‌ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌ ಪಡೆದಿದ್ದಾರೆ ಎಂದು ಸಂಸ್ಥೆ ಹೇಳಿದೆ.

ವಿಜ್ಞಾನ ಮತ್ತು ಸಮಾಜ ವಿಜ್ಞಾನ ಹಾಗೂ ವೈದ್ಯಕೀಯ ಮತ್ತು ಎಂಜಿನಿಯರಿಂಗ್‌ನಲ್ಲಿ ಅಭ್ಯಾಸ ಮುಂದುವರಿಸಲು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದಕ್ಕಾಗಿ ರೂಪಿಸಲಾಗಿರುವ ಈ ಪರೀಕ್ಷೆಯಲ್ಲಿ ಸಂಸ್ಥೆಯ ಇತರೆ ನಾಲ್ವರು ವಿದ್ಯಾರ್ಥಿಗಳೂ ಉತ್ತಮ ರ‍್ಯಾಂಕ್‌ ಪಡೆದಿದ್ದಾರೆ ಎಂದು ಸಂಸ್ಥೆ ಹೇಳಿದೆ.

ಸಾಮಾನ್ಯ ವರ್ಗದಲ್ಲಿ 200 ಅಂಕಗಳಿಗೆ 188 ಅಂಕಗಳನ್ನು ರಿಧಿ ಗಳಿಸಿದ್ದಾರೆ. ಬೆಂಗಳೂರಿನ ಹೇಮಾಂಗ್‌ ದವೆ 176, ದೀಪಕ್‌ ಚರಣ್‌ 173, ವೈಭವ್‌ ರಾಜ್‌ 171 ಹಾಗೂ ಅನನ್ಯಾ ಹಲಗತ್ತಿ 170 ಅಂಕಗಳನ್ನು ಪಡೆದಿದ್ದಾರೆ.

‘ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಎನ್‌ಟಿಎಸ್‌ಇಯಲ್ಲಿ ರಾಜ್ಯದಲ್ಲಿಯೇ ಪ್ರಮುಖ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿ’ ಎಂದು ಆಕಾಶ್‌ ಎಜುಕೇಷನಲ್‌ ಸರ್ವಿಸಸ್‌ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಆಕಾಶ್‌ ಚೌಧರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT