ಬೆಂಗಳೂರು: ಪುಲಿಕೇಶಿನಗರ ಕ್ಷೇತ್ರದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರನ್ನು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಜ್ಯ ಉಸ್ತುವಾರಿ ಹಾಗೂ ಸಂಯೋಜಕರಾಗಿ ನೇಮಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಆದೇಶಿಸಿದ್ದಾರೆ.
ಅಖಂಡ ಅವರನ್ನು ನೇಮಿಸುವಂತೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಶೋಕ್ ಸಿದ್ಧಾರ್ಥ್ ಅವರು ಮಾಡಿದ್ದ ಶಿಫಾರಸ್ಸಿನ ಮೇರೆಗೆ ನೇಮಕ ಮಾಡಲಾಗಿದೆ ಎಂದು ರಾಜ್ಯ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.