ಬೆಂಗಳೂರು: ಗಲಭೆ ವೇಳೆ ಮನೆ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಸಿಸಿಬಿ ಡಿಸಿಪಿ ರವಿಕುಮಾರ್ ಅವರನ್ನು ಬುಧವಾರ ಭೇಟಿಯಾದರು.

ದಾಳಿಗೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳೊಂದಿಗೆ ಮಾಹಿತಿ ಹಂಚಿಕೊಂಡರು. ಈ ವೇಳೆ, 'ನನ್ನವರೇ ನನ್ನ ಬೆನ್ನಿಗೆ ಚೂರಿ ಹಾಕಿದ್ದಾರೆ. ನನಗೆ ಯಾರ ಮೇಲೂ ಅನುಮಾನವಿರಲಿಲ್ಲ. ಆದರೆ, ಜೊತೆಗಿದ್ದು ಈ ರೀತಿ ಮಾಡಿದ್ದಾರೆ' ಎಂದು ಕೆಲವರ ಹೆಸರನ್ನು ಹೇಳಿದ್ದು, ಅದನ್ನು ಗೋಪ್ಯವಾಗಿ ಇಡಲಾಗಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ಬಳಿಕ ಪ್ರತಿಕ್ರಿಯಿಸಿದ ಅವರು, 'ಸಿಸಿಬಿ ಅಧಿಕಾರಿಗಳ ಮುಂದೆ ಕೆಲವೊಂದು ಮಾಹಿತಿ ನೀಡಿದ್ದೇನೆ. ಆದರೆ, ಯಾರ ಮೇಲೆ ಅನುಮಾನ ಇದೆ ಎಂದು ಹೇಳುವುದಿಲ್ಲ. ಅದು ತನಿಖೆಯಿಂದ ಹೊರಬೀಳಲಿ. ಅಪರಾಧಿಗಳಿಗೆ ಶಿಕ್ಷೆ ಆಗಬೇಕು. ಮನೆ ಮೇಲೆ ದಾಳಿ ಹಾಗೂ ಚುನಾವಣೆ ವಿಚಾರದಲ್ಲಿ ಗಲಾಟೆ ಆಗಿರುವ ಬಗ್ಗೆಯೂ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದೇನೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.