ಮಂಗಳವಾರ, ಜನವರಿ 21, 2020
25 °C

ಜೆಎನ್‌ಯು ಮುಚ್ಚಿಸಿ: ಅಖಿಲ ಭಾರತ ಹಿಂದೂ ಮಹಾಸಭಾ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಗೂಂಡಾ ಪದ್ಧತಿ ತಾಂಡವವಾಡುತ್ತಿದೆ. ಅಲ್ಲಿನ ವಿದ್ಯಾರ್ಥಿಗಳನ್ನು ಬೇರೆ ವಿಶ್ವವಿದ್ಯಾಲಯಗಳಿಗೆ ವರ್ಗ ಮಾಡಿ,ಅನಿರ್ದಿಷ್ಟಾವಧಿಯವರೆಗೆ ಜೆಎನ್‌ಯು ಮುಚ್ಚಬೇಕು’ ಎಂದು ಅಖಿಲ ಭಾರತ ಹಿಂದೂ ಮಹಾಸಭಾ ಒತ್ತಾಯಿಸಿದೆ.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಡಿ.ವಿವೇಕಾನಂದ ಸ್ವಾಮಿ,‘ ‘ದೇಶವನ್ನು ತುಂಡು ತುಂಡು ಮಾಡುತ್ತೇವೆ ಎನ್ನುವ ದೇಶದ್ರೋಹಿಗಳು ಅಲ್ಲಿ ಇದ್ದಾರೆ. ಅವರನ್ನು ಮಟ್ಟ ಹಾಕಬೇಕು’ ಎಂದು ಒತ್ತಾಯಿಸಿದರು.

‘ದೇಶದ ಏಕತೆಗೆ ಧಕ್ಕೆ ತರುವ ಘೋಷಣೆಗಳನ್ನು ಕೂಗುವ ರಾಜಕರಣಿಗಳು, ನಟ, ನಟಿಯರು ಹಾಗೂ ಬರಹಗಾರ್ತಿ ಅರುಂಧತಿ ರಾಯ್ ಅವರನ್ನು ಬಂಧಿಸಬೇಕು. ಸಾವರ್ಕರ್ ಅವರಿಗೆ ಭಾರತರತ್ನ ನೀಡಬೇಕು’ ಎಂದು ಒತ್ತಾಯಿಸಿದರು.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು