ಬೆಂಗಳೂರು: ತೆಲುಗು ವಿಜ್ಞಾನ ಸಮಿತಿ ವತಿಯಿಂದ ನಟ ದಿವಂಗತ ಅಕ್ಕಿನೇನಿ ನಾಗೇಶ್ವರರಾವ್ ಅವರ ಶತಮಾನೋತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 21ರ ಸಂಜೆ 5.30ಕ್ಕೆ ವೈಯಾಲಿಕಾವಲ್‌ನಲ್ಲಿರುವ ಶ್ರೀ ಕೃಷ್ಣದೇವರಾಯ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಎ.ರಾಧಾಕೃಷ್ಣರಾಜು ತಿಳಿಸಿದರು.
ದಕ್ಷಿಣ ಭಾರತ ಚಿತ್ರನಟರಾದ ಸುಮನ್ ತಲ್ಸಾರ್ ಹಾಗೂ ಜಯಸುಧಾ ಅವರಿಗೆ ಶತಮಾನೋತ್ಸವ ಪುರಸ್ಕಾರ ನೀಡಿ ಗೌರವಿಸಲಾಗುವುದು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಮಾರಂಭ ಉದ್ಘಾಟಿಸಲಿದ್ದು, ಆಂಧ್ರಪ್ರದೇಶದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸತ್ಯಕುಮಾರ್ ಭಾಗವಹಿಸುವರು ಎಂದರು.
ಇದೇ ವೇಳೆ ಅಕ್ಕಿನೇನಿ ನಾಗೇಶ್ವರರಾವ್ ಅವರ ಚಲನಚಿತ್ರ ಗೀತೆಗಳನ್ನು ನವೀನ್ ಮತ್ತು ಧನಲಕ್ಷ್ಮೀ ಅವರು ಹಾಡಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತೆಲುಗು ಹಾಗೂ ಕನ್ನಡ ಮಹಾಕವಿಗಳ ವರ್ಣಚಿತ್ರಗಳ ಉದ್ಘಾಟನೆ ನೆರವೇರಿಸುವರು ಎಂದು ಪ್ರಧಾನ ಕಾರ್ಯದರ್ಶಿ ಐ.ಲಕ್ಷ್ಮೀ ರೆಡ್ಡಿ ತಿಳಿಸಿದರು.