ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಕ್ಷಯ ಕ್ರೆಡಿಟ್‌ ಸಹಕಾರಿ ಸಂಘ: ಪ್ರಸಕ್ತ ಸಾಲಿನಲ್ಲಿ ಗರಿಷ್ಠ ಠೇವಣಿ ಸಂಗ್ರಹ

Published : 15 ಸೆಪ್ಟೆಂಬರ್ 2024, 16:01 IST
Last Updated : 15 ಸೆಪ್ಟೆಂಬರ್ 2024, 16:01 IST
ಫಾಲೋ ಮಾಡಿ
Comments

ಯಲಹಂಕ: ಹುಣಸಮಾರನಹಳ್ಳಿಯ ಸರ್ಕಾರಿ ಶಾಲೆಯ ಆವರಣದಲ್ಲಿ ಅಕ್ಷಯ ಕ್ರೆಡಿಟ್‌ ಸೌಹಾರ್ದ ಸಹಕಾರಿ ಸಂಘದ 2023-24ನೇ ಸಾಲಿನ 14ನೇ ವಾರ್ಷಿಕ ಸರ್ವಸದಸ್ಯರ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಆರ್‌.ರವಿಚಂದ್ರ, ಸಹಕಾರಿಯಲ್ಲಿ ನೂತನವಾಗಿ ಬಡ ಮತ್ತು ಮಧ್ಯಮವರ್ಗದ ಮಹಿಳೆಯರಿಗಾಗಿ ವಿಶೇಷ ಸಾಲ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಶಿಕ್ಷಣ ಸಾಲ ಮತ್ತಿತರ ಸೌಲಭ್ಯಗಳನ್ನು ಆರಂಭಿಸಲಾಗಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಿಳಾ ಸಬಲೀಕರಣ, ಯುವಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಹಕಾರ ಕ್ಷೇತ್ರಕ್ಕೆ ಆಕರ್ಷಿಸಲು ಸದಸ್ಯತ್ವ ನೋಂದಣಿ ಅಭಿಯಾನ ಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದರು.

‘ಪ್ರಸಕ್ತ ಸಾಲಿನಲ್ಲಿ ಸಂಘದಲ್ಲಿ ಗರಿಷ್ಠ ಪ್ರಮಾಣದಲ್ಲಿ ಠೇವಣಿಗಳ ಸಂಗ್ರಹವಾಗಿದೆ. ಸಾಲ ವಿತರಣೆ ಮತ್ತು ವಸೂಲಾತಿಯಲ್ಲಿಯೂ ಗಮನಾರ್ಹ ಸಾಧನೆ ಮಾಡಲಾಗಿದೆ’ ಎಂದರು.

ಇದೇ ಸಂದರ್ಭದಲ್ಲಿ ಎಸ್‌.ಎಸ್‌.ಎಲ್‌.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸಂಘದ ಉಪಾಧ್ಯಕ್ಷೆ ಎ.ಎಂ.ಸುಜಾತ, ನಿರ್ದೇಶಕರಾದ ಬಿ.ಆರ್‌.ಬೈರೇಗೌಡ, ಲತಾರಾಣಿ, ಎ.ಸಣ್ಣವೀರಣ್ಣ, ಪಿ.ಶಿವಕುಮಾರ್‌, ಕೆ.ಪಿ.ರವಿಕುಮಾರ್‌, ವಿ.ಚಂದ್ರಮೋಹನ್‌, ಎಚ್‌. ಜಿ.ಸರಸ್ವತಿ, ಮಂಗಳ, ಕೆ.ಜೆ.ಶ್ವೇತಾ, ಕೆ.ಸಿ.ನಾರಾಯಣಗೌಡ, ಎಂ.ಚಂದ್ರಶೇಖರಯ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಿ.ಎಸ್‌.ವೆಂಕಟಾಚಲಪತಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT