ಬೆಂಗಳೂರು: ಶಾಲಾ ಮಕ್ಕಳ ಹಸಿವು ನೀಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಅಕ್ಷಯಪಾತ್ರ ಫೌಂಡೇಷನ್, 500 ಕೋಟಿ ಊಟ ವಿತರಿಸಿದ ಸಾಧನೆ ಮಾಡಿದೆ.

ಸಂಸ್ಥೆಯು 25 ವರ್ಷಗಳ ಅವಧಿಯಲ್ಲಿ, ಕೇಂದ್ರ ಸರ್ಕಾರದ ‘ಪಿಎಂ ಪೋಷಣ್’ ಯೋಜನೆಯಡಿ ಈ ಸಾಧನೆ ಮಾಡಿದೆ. ಕೇಂದ್ರ ಸರ್ಕಾರವು ‘ವಿಕಸಿತ ಭಾರತಕ್ಕಾಗಿ ಪೌಷ್ಟಿಕ ಮತ್ತು ಸುಶಿಕ್ಷಿತ ಭಾರತ’ ಎಂಬ ಆಶಯದೊಂದಿಗೆ, ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಇದೇ 17ರಂದು ಅಭಿನಂದನಾ ಸಮಾರಂಭ ಹಮ್ಮಿಕೊಂಡಿದೆ.

ಫೌಂಡೇಷನ್ನ ಅಧ್ಯಕ್ಷ ಮಧು ಪಂಡಿತ ದಾಸ, ಉಪಾಧ್ಯಕ್ಷ ಚಂಚಲಪತಿ ದಾಸ ಹಾಗೂ ಟ್ರಸ್ಟಿಗಳು ಪಾಲ್ಗೊಳ್ಳಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸ್ಥೆಯ ಪ್ರತಿನಿಧಿಗಳನ್ನು ಗೌರವಿಸಲಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಅತಿಥಿಯಾಗಿ ಭಾಗವಹಿಸಲಿದ್ದಾರೆ.

‘2000ನೇ ಇಸವಿಯಲ್ಲಿ ಬೆಂಗಳೂರಿನಲ್ಲಿ ಸಣ್ಣ ಪ್ರಮಾಣದಲ್ಲಿ ಆರಂಭವಾದ ಅಕ್ಷಯಪಾತ್ರದ ಮಧ್ಯಾಹ್ನದ ಬಿಸಿಯೂಟ ಯೋಜನೆ, ಇಂದು ಹೆಮ್ಮರವಾಗಿ ಬೆಳೆದಿದೆ. ಪ್ರಸ್ತುತ ದೇಶದ 16 ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳ ಸುಮಾರು 23.5 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಪ್ರತಿದಿನ ಪೌಷ್ಟಿಕ ಆಹಾರವನ್ನು ತಲುಪಿಸಲಾಗುತ್ತಿದೆ. ಶಾಲಾ ಹಂತದಲ್ಲಿಯೇ ಹಸಿವನ್ನು ನೀಗಿಸುವ ಮೂಲಕ ಮಕ್ಕಳನ್ನು ಶಿಕ್ಷಣದತ್ತ ಸೆಳೆಯುವ, ಸದೃಢ ಭಾರತ ನಿರ್ಮಿಸುವ ಸಂಸ್ಥೆಯ ಈ 25 ವರ್ಷಗಳ ಪಯಣವು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ’ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.