ಅಲೆಮಾರಿ ಆಯೋಗ ಸ್ಥಾಪನೆಗೆ ಒಲವು

7

ಅಲೆಮಾರಿ ಆಯೋಗ ಸ್ಥಾಪನೆಗೆ ಒಲವು

Published:
Updated:

ಬೆಂಗಳೂರು: ಅಲೆಮಾರಿ ಆಯೋಗ ರಚನೆಗೆ ವಿಸ್ತೃತ ಕಾರ್ಯಸಾಧ್ಯ ವರದಿ ಸಲ್ಲಿಸಲು ಸಮಿತಿ ರಚಿಸಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯ ಅಲೆಮಾರಿ ಬುಡಕಟ್ಟು ಸಂಘಟನೆಗಳ ಪ್ರತಿನಿಧಿಗಳ ಜತೆಗೆ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಶುಕ್ರವಾರ ಚರ್ಚಿಸಿದರು. 

‘ಅಲೆಮಾರಿಗಳ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಸರ್ಕಾರ ಬದ್ಧ. ಈ ಕೆಲಸಕ್ಕೆ ಅನುದಾನದ ಕೊರತೆ ಇಲ್ಲ. ಪ್ರತಿ ಅಲೆಮಾರಿ ಕುಟುಂಬಕ್ಕೆ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಈ ಎಲ್ಲ ಕೆಲಸಗಳು ಸಮರೋಪಾದಿಯಲ್ಲಿ ಪೂರ್ಣಗೊಳ್ಳಬೇಕು’ ಎಂದರು.

ಹಿರಿಯ ವಕೀಲ ಸಿ.ಎಸ್‌.ದ್ವಾರಕಾನಾಥ್‌, ‘ಅಲೆಮಾರಿ ಸಮುದಾಯಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗಗಳಲ್ಲಿ ಹಂಚಿಹೋಗಿದ್ದು, ಗೊಂದಲ ಸೃಷ್ಟಿಯಾಗಿದೆ. ಜಾತಿ ಪ್ರಮಾಣ ಪತ್ರ ದೊರಕುವುದು ಕಷ್ಟವಾಗಿರುವುದರಿಂದ ಸರ್ಕಾರದ ಸೌಲಭ್ಯಗಳಿಂದ  ವಂಚಿತರಾಗುತ್ತಿದ್ದಾರೆ’ ಎಂದರು.

‘ಈ ಗೊಂದಲಗಳನ್ನು ನಿವಾರಿಸಲು ಹಾಗೂ ಲೋಪದೋಷಗಳನ್ನು ಸರಿಪಡಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡುತ್ತೇನೆ ಎಂದು ಕುಮಾರಸ್ವಾಮಿ ಭರವಸೆ ನೀಡಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !