ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶೇಷ ಪ್ಯಾಕೇಜ್‌ಗೆ ಅಲೆಮಾರಿ ಮಹಾಸಭಾ ಒತ್ತಾಯ

Last Updated 6 ಫೆಬ್ರುವರಿ 2021, 18:05 IST
ಅಕ್ಷರ ಗಾತ್ರ

ಬೆಂಗಳೂರು: ಅಲೆಮಾರಿಗಳಿಗೆ ಶಾಶ್ವತ ಕಾಯಕಲ್ಪ ಒದಗಿಸಲು 2021-22 ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಎಸ್‌ಸಿಎಸ್‌ಟಿ ಅಲೆಮಾರಿ ಬುಡಕಟ್ಟು ಮಹಾಸಭಾ ಸರ್ಕಾರವನ್ನು ಒತ್ತಾಯಿಸಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಮಹಾಸಭಾದ ನಿಯೋಗ, ‘ಅಲೆಮಾರಿ ವರ್ಗಗಳಿಗೆ ಶಾಶ್ವತ ಸೂರು, ಅಧ್ಯಯನ ಮತ್ತು ಸಂಶೋಧನಾ ಕೇಂದ್ರ, ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಪ್ಯಾಕೇಜ್ ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನ ಒದಗಿಸಬೇಕು’ ಎಂದು ಮನವಿ ಮಾಡಿತು.

ಅಲೆಮಾರಿಗಳ ಕಲ್ಯಾಣ ಮತ್ತು ಅಭಿವೃದ್ದಿಯ ಬಗ್ಗೆ ಅಧಿವೇಶನದಲ್ಲಿ ಒತ್ತಾಯಿಸುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಎಲ್ಲಾ ಸಚಿವರನ್ನೂ ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ ಎಂದು ಮಹಾಸಭಾ ತಿಳಿಸಿದೆ.

ನಿಯೋಗದಲ್ಲಿ ರಾಜ್ಯ ಸಿಳ್ಳೇಕ್ಯಾತಾಸ್ ಜನಾಂಗಾಭಿವೃದ್ಧಿ ವೇದಿಕೆ ಅಧ್ಯಕ್ಷ ಬಿ.ಎಚ್. ಮಂಜುನಾಥ ದಾಯತ್ಕರ್, ಅಲೆಮಾರಿ ಬುಡಕಟ್ಟು ಮಹಾಸಭಾ ಕಾರ್ಯಾಧ್ಯಕ್ಷ ವೆಂಕಟರಮಣಯ್ಯ , ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್ ಕೊತ್ತಗೆರೆ, ಉಪಾಧ್ಯಕ್ಷ ಅನಂತಕುಮಾರ್ ಏಕಲವ್ಯ, ಖಜಾಂಚಿ ಆದರ್ಶ್ ಯಲ್ಲಪ್ಪ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT