ಬೆಂಗಳೂರು: ‘ಆ್ಯಂಬಿಡೆಂಟ್’ ಕಂಪನಿ ವಂಚನೆ ಪ್ರಕರಣದಡಿ ಸಿಸಿಬಿ ಪೊಲೀಸರು ಬಂಧಿಸಿದ್ದ ಆರೋಪಿಆಲಿಖಾನ್‌ನನ್ನು 61ನೇ ಸಿಸಿಎಚ್ ನ್ಯಾಯಾಲಯವು ನ. 12ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಆಲಿಖಾನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿತ್ತು. ಆತನನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು, ಎಂಟು ದಿನಗಳವರೆಗೆ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾರೆ. ಕಸ್ಟಡಿ ಅವಧಿ ಮುಕ್ತಾಯವಾಗಿದ್ದರಿಂದಾಗಿ ಆತನನ್ನು ನ್ಯಾಯಾಲಯಕ್ಕೆ ಗುರುವಾರ ಹಾಜರುಪಡಿಸಿದ್ದರು.

ಹಣ ವಾಪಸ್ ಕೊಡುತ್ತೇನೆ: ‘ನಾನು ಪಡೆದುಕೊಂಡಿರುವ ₹20 ಕೋಟಿಯನ್ನು ವಾಪಸ್ ಕೊಡುತ್ತೇನೆ. ಜಾಮೀನು ಮೇಲೆ ಹೊರ ಬರುತ್ತಿದ್ದಂತೆ ಹಣ ಹೊಂದಿಸಿ ನ್ಯಾಯಾಲಯಕ್ಕೆ ಒಪ್ಪಿಸುತ್ತೇನೆ. ಅದನ್ನು ಬಿಟ್ಟು ಬೇರೆ ಏನು ಕೇಳಬೇಡಿ’ ಎಂದು ಆಲಿಖಾನ್ ವಿಚಾರಣೆಯಲ್ಲಿ ಹೇಳಿರುವುದಾಗಿ ಸಿಸಿಬಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.