ಬೆಂಗಳೂರು: ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಜಾತಿಗಳಿಗೆ ಒಳ ಮೀಸಲಾತಿಯನ್ನು ಕಲ್ಪಿಸುವ ನಿರ್ಧಾರವನ್ನು ಡಾ.ಬಿ.ಆರ್. ಅಂಬೇಡ್ಕರ್ ಅವರ ಪರಿನಿಬ್ಬಾಣದ ದಿನವಾದ ಡಿಸೆಂಬರ್ 6ರೊಳಗೆ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಬೇಕು ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಆಗ್ರಹಿಸಿದೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ, ‘ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಸಂವಿಧಾನಬದ್ಧವಾಗಿದ್ದು, ಇದನ್ನು ಜಾರಿಗೊಳಿಸುವ ಅಧಿಕಾರವನ್ನು ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಗಳಿಗೆ ನೀಡಿದೆ. ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಎಲ್ಲ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯ ನೀಡಬೇಕು’ ಎಂದು ಒತ್ತಾಯಿಸಿದರು.

‘1921ರಲ್ಲಿ ಮಿಲ್ಲರ್ ಆಯೋಗ ನೀಡಿದ ವರದಿ ಪ್ರಕಾರ ಬ್ರಾಹ್ಮಣೇತರ ಜಾತಿಗಳಾದ ಒಕ್ಕಲಿಗ, ಲಿಂಗಾಯತ, ರೆಡ್ಡಿ ಸಮುದಾಯಗಳು ಶೇಕಡ 75ರಷ್ಟು ಮೀಸಲಾತಿ ಪಡೆದುಕೊಂಡಿವೆ. ಮೀಸಲಾತಿ ಲಾಭ ಪಡೆದ ಈ ಸಮುದಾಯದವರು ಇಂದು ಎಲ್ಲ ಕ್ಷೇತ್ರಗಳಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ. 2015ರಲ್ಲಿ ಕಾಂತರಾಜ ಆಯೋಗ ನೀಡಿದ ಜಾತಿವಾರು ಜನಗಣತಿ ವರದಿಯನ್ನು ಅಂಗೀಕರಿಸದಂತೆ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಅಹಿಂದ ವರ್ಗಗಳ ನಾಯಕರಾದ ಸಿದ್ದರಾಮಯ್ಯ ಅವರು ಈ ವರದಿಯನ್ನು ಅಂಗೀಕರಿಸಬೇಕು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.