ಭಾನುವಾರ, ಜುಲೈ 3, 2022
22 °C

ಬೆಂಗಳೂರು: ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಮೇಲೆ‌ ಹಲ್ಲೆ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಯಶವಂತಪುರದ ಉನ್ನತೀಕರಿಸಿದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ. ಸುನೀತಾ ಅವರ ಮೇಲೆ ಐವರ ತಂಡ ಹಲ್ಲೆ ಮಾಡಿರುವ ಆರೋಪ ವ್ಯಕ್ತವಾಗಿದೆ.

'ಗುರುವಾರ ಬೆಳಿಗ್ಗೆ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಆಸ್ಪತ್ರೆಗೆ ನುಗ್ಗಿದ್ದ ಐವರು, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ದೂರು ನೀಡಲು ಸುನೀತಾ ಅವರು ಯಶವಂತಪುರ ಠಾಣೆಗೆ ಹೋಗಿದ್ದಾರೆ' ಎಂದು ಆಸ್ಪತ್ರೆ ಸಿಬ್ಬಂದಿಯೊಬ್ಬರು ಹೇಳಿದರು.

ಹಲ್ಲೆಗೆ ಕಾರಣ ಗೊತ್ತಾಗಿಲ್ಲ. ಹಲ್ಲೆ‌ ಮಾಡಿದವರು ಸ್ಥಳೀಯ ಮುಖಂಡರೊಬ್ಬರ ಬೆಂಬಲಿಗರು ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ‌ ಯಶವಂತಪುರ ಪೊಲೀಸರು, 'ವೈದ್ಯೆಯಿಂದ‌ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು' ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು