ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚುನಾವಣಾ ಅಕ್ರಮ ಆರೋಪ: ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ಗೆ ನೋಟಿಸ್‌

Published : 27 ಆಗಸ್ಟ್ 2024, 15:49 IST
Last Updated : 27 ಆಗಸ್ಟ್ 2024, 15:49 IST
ಫಾಲೋ ಮಾಡಿ
Comments

ಬೆಂಗಳೂರು: ಚುನಾವಣಾ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ದಾವಣಗೆರೆ ಕ್ಷೇತ್ರದ ಕಾಂಗ್ರೆಸ್‌ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಚುನಾವಣೆಯಲ್ಲಿ ಪ್ರಭಾವ ಹೊಂದಿದ ಜಿಜೆಪಿಯ ಜಿ.ಎಸ್.ಗಾಯಿತ್ರಿ ಸಿದ್ದೇಶ್ವರ್ ಹಾಗೂ ದಾವಣಗೆರೆಯ ಸುಭಾನ್ ಖಾನ್ ಸಲ್ಲಿಸಿರುವ ಈ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ‌ ಮಂಗಳವಾರ ವಿಚಾರಣೆ ನಡೆಸಿತು.

ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಪ್ರಭಾ ಮಲ್ಲಿಕಾರ್ಜುನ್ ಸೇರಿದಂತೆ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಇತರ ಅಭ್ಯರ್ಥಿಗಳು ಹಾಗೂ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.

ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಪ್ರತಿವಾದಿಗಳಿಗೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಿತು.

‘ಪ್ರಭಾ ಮಲ್ಲಿಕಾರ್ಜುನ್ ಗ್ಯಾರಂಟಿ ಕಾರ್ಡ್ ವಿತರಿಸಿ ಮತದಾರರಿಗೆ ಆಮಿಷವೊಡಿದ್ದಾರೆ. ಮಹಿಳೆಯರಿಗೆ ₹1 ಲಕ್ಷ ಕೊಡುವುದಾಗಿ ಭರವಸೆ ನೀಡಿದ್ದರು. ಅಲ್ಲದೆ, ಹಲವು ಚುನಾವಣಾ ಅಕ್ರಮ ನಡೆಸಿ ಆಯ್ಕೆಯಾಗಿದ್ದಾರೆ. ಇದು ಜನ‍ಪ್ರಾತಿನಿಧ್ಯ ಕಾಯ್ದೆಗೆ ವಿರುದ್ಧವಾಗಿರುವ ಕಾರಣ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT