ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಮಾಳ ಒತ್ತುವರಿ ಆರೋಪ: ಸರ್ಕಾರಕ್ಕೆ ನೋಟಿಸ್

Published 23 ಮೇ 2024, 16:33 IST
Last Updated 23 ಮೇ 2024, 16:33 IST
ಅಕ್ಷರ ಗಾತ್ರ

ಬೆಂಗಳೂರು: ‘ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಮಜರಾ ಹೊಸಹಳ್ಳಿಯಲ್ಲಿ ಖಾಸಗಿ ವ್ಯಕ್ತಿಗಳಿಂದ ಕನಿಷ್ಠ 35 ಎಕರೆ ಗೋಮಾಳ ಜಮೀನಿನ ಒತ್ತುವರಿಯಾಗಿದೆ. ಅದನ್ನು ತೆರವುಗೊಳಿಸಲು ಆದೇಶಿಸಬೇಕು’ ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಕುರಿತಂತೆ ‘ಕರ್ನಾಟಕ ದಲಿತ ಸಂಘರ್ಷ ಸಮಿತಿ’ ಸಮನ್ವಯಕಾರ ರಾಮು ನೇರಳಘಟ್ಟ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ನೇತೃತ್ವದ ರಜಾಕಾಲದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ರಾಜ್ಯ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ, ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ, ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್‌ಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿದೆ.

ಅರ್ಜಿಯಲ್ಲಿ ಏನಿದೆ?: ‘ಮಜರಾ ಹೊಸಹಳ್ಳಿಯ ವಿವಿಧ ಸರ್ವೆ ನಂಬರ್‌ಗಳಲ್ಲಿರುವ 35 ಎಕರೆ ಜಮೀನನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿದ್ದಾರೆ. ಜಾಗದ ಸುತ್ತಲೂ ತಡೆಗೋಡೆ ನಿರ್ಮಿಸಲಾಗಿದೆ. ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ, ಒತ್ತುವರಿ ತೆರವುಗೊಳಿಸಲು ಕೋರಿ ಸ್ಥಳೀಯ ಜಿಲ್ಲಾಧಿಕಾರಿ, ಸಹಾಯಕ ಉಪವಿಭಾಗಾಧಿಕಾರಿ ಮತ್ತು ತಹಶೀಲ್ದಾರ್‌ ಅವರಿಗೆ ಸಾಕ್ಷ್ಯಾಧಾರಗಳ ಸಮೇತ ದೂರು ನೀಡಲಾಗಿತ್ತು. ಆದರೆ, ಈವರೆಗೂ ಒತ್ತುವರಿ ತೆರವುಗೊಳಿಸಲು ಅಗತ್ಯ ಕ್ರಮ ಕೈಗೊಂಡಿಲ್ಲ. ಒತ್ತುವರಿ ತೆರವುಗೊಳಿಸಬೇಕು. ಒತ್ತುವರಿದಾರರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ನಿರ್ದೇಶಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT