ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಸ್ಲಿಮರಿಗೆ ಅವಮಾನ ಆರೋಪ: ಅಜಿತ್‌ ಹನುಮಕ್ಕನವರ್‌ ವಿರುದ್ಧ ಪ್ರಕರಣ ದಾಖಲು

Published 13 ಮೇ 2024, 16:11 IST
Last Updated 13 ಮೇ 2024, 16:11 IST
ಅಕ್ಷರ ಗಾತ್ರ

ಬೆಂಗಳೂರು: ‘ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಭಾರತದ ಮುಸ್ಲಿಮರಿಗೆ ಅವಮಾನಿಸಲಾಗಿದೆ’ ಎಂದು ಆರೋಪಿಸಿ, ದೂರು ನೀಡಲಾಗಿದ್ದು, ಸುವರ್ಣ ಸುದ್ದಿವಾಹಿನಿ ಸಂಪಾದಕ ಅಜಿತ್‌ ಹನುಮಕ್ಕನವರ್‌ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ತನ್ವೀರ್‌ ಅಹ್ಮದ್ ಎಂಬುವವರು ನೀಡಿದ ದೂರು ಆಧರಿಸಿ ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿದೆ. ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಲಾಗಿದೆ. ಅವರು ವಿಚಾರಣೆಗೆ ಬಂದಿಲ್ಲ’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

‘ಮೇ 9ರಂದು ರಾತ್ರಿ 8.30ಕ್ಕೆ ಅಜಿತ್‌ ಅವರು ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದರು. ಪರದೆಯ ಮೇಲೆ ಹಿಂದೂಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಭಾರಿ ಏರಿಕೆ ಎಂದು ಬರೆಯಲಾಗಿತ್ತು. ಭಾರತದ ರಾಷ್ಟ್ರಧ್ವಜ ಹಾಕಿ ಹಿಂದೂ ಜನಸಂಖ್ಯೆ ಶೇ 7.82 ಇಳಿಕೆ ಹಾಗೂ ಪಾಕಿಸ್ತಾನದ ರಾಷ್ಟ್ರಧ್ವಜ ಹಾಕಿ ಮುಸ್ಲಿಂ ಜನಸಂಖ್ಯೆ ಶೇ 43.15 ಬಾರಿ ಏರಿಕೆ ಎಂದು ಬರೆದು ಕಾರ್ಯಕ್ರಮ ನಡೆಸಿಕೊಡಲಾಗಿತ್ತು. ಭಾರತದ ಮುಸ್ಲಿಮರನ್ನು ಪಾಕಿಸ್ತಾನದವರೆಂದು ಬಿಂಬಿಸಿ ಅವಮಾನ ಮಾಡಲಾಗಿದೆ. ಮುಸ್ಲಿಂ ಸಮುದಾಯದವರು ಭಾರತದ ದೇಶದ ಸ್ವಾತಂತ್ರ್ಯ ಹೋರಾಟದ ಹಾದಿಯಿಂದ ಇದುವರೆಗೂ ಸಾಕಷ್ಟು ಕೊಡುಗೆ ನೀಡಿದ್ದಾರೆ. ಆದರೂ, ಈ ಸಮುದಾಯವನ್ನು ಅವಮಾನಿಸುವ ರೀತಿಯಲ್ಲಿ ಕಾರ್ಯಕ್ರಮ ನಡೆಸಿದ್ದಾರೆ. ಅಜಿತ್‌ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT