ಬೆಂಗಳೂರು: ಈ ಬಾರಿಯ ಬಜೆಟ್ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕೇವಲ ₹1 ಸಾವಿರ ಹಾಗೂ ಸಹಾಯಕಿಯರಿಗೆ ₹750 ಗೌರವಧನ ಹೆಚ್ಚಳ ಮಾಡಿರುವ ಸರ್ಕಾರದ ನಡೆ ಖಂಡಿಸಿ ಮಾರ್ಚ್ 19ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿ ತಿಳಿಸಿದೆ.

ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಪದಾಧಿಕಾರಿಗಳು ‘ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಒಂದು ತಿಂಗಳಿಗೆ ₹ 15 ಸಾವಿರ, ಸಹಾಯಕಿಯರಿಗೆ ₹ 10 ಸಾವಿರ ಗೌರವಧನ ನೀಡುವ ಭರವಸೆ ನೀಡಲಾಗಿತ್ತು. ಆದರೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾದರು ಈಡೇರಿಸಿಲ್ಲ’ ಎಂದು ಆರೋಪಿಸಿದರು.

‘ಅಗತ್ಯ ವಸ್ತುಗಳ ಬೆಲೆ ಏರಿಕೆ, ಮನೆ ಬಾಡಿಗೆ ಸೇರಿದಂತೆ ಇತರೆ ಖರ್ಚು ವೆಚ್ಚಗಳ ಜೊತೆಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ. ಆದರೆ, ಸರ್ಕಾರ ನಮಗೆ ಕನಿಷ್ಠ ವೇತನದ ವ್ಯಾಪ್ತಿಗೆ ಒಳಪಡಿಸಿ ಸಂಭಾವನೆ ನೀಡದೆ ಅನ್ಯಾಯ ಮಾಡುತ್ತಿದೆ. ನಿವೃತ್ತರಾದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸೌಲಭ್ಯ ನೀಡಬೇಕು’ ಎಂದು ಆಗ್ರಹಿಸಿದರು.

‘ಎಲ್ಲ ಅಂಗನವಾಡಿ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಮಸ್ಯೆಗಳಿಗೆ ಪರಿಹಾರ ನೀಡಬೇಕು. ಇತ್ತೀಚೆಗೆ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳು ತಮಗೆ ಬೇಕಾದ ಸಂಘಟನೆಗಳೊಂದಿಗೆ ಚರ್ಚಿಸುತ್ತಿರುವುದು ಖಂಡನೀಯ’ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಜಿ.ಆರ್. ಶಿವಶಂಕರ್, ಬಿ. ನಾಗರತ್ನಮ್ಮ, ಬಿ. ಅಮ್ಜದ್, ಎಂ. ಜಯಮ್ಮ, ಕೆ. ಸೋಮಶೇಖರ್ ಯಾದಗಿರಿ, ಎಂ. ಉಮಾದೇವಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.