ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ವಿದ್ಯುತ್ ವಿಭಾಗದಲ್ಲಿ ನಡೆಸಿರುವ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವೈಭವ ಕರ್ನಾಟಕ ಭೂ ರಕ್ಷಣಾ ವೇದಿಕೆ ಆರೋಪಿಸಿದೆ.

2022–2023ನೇ ಸಾಲಿನಲ್ಲಿ ನಕಲಿ ಪರವಾನಗಿ ಮತ್ತು ಬ್ಯಾಂಕ್ ನಿಶ್ಚಿತ ಠೇವಣಿ (ಎಫ್ಡಿ) ದಾಖಲೆಗಳನ್ನು ಸೃಷ್ಟಿ ಮಾಡಿಕೊಂಡಿರುವ ಅನರ್ಹ ಗುತ್ತಿಗೆದಾರರಾದ ಗೀತಾ ಎಲೆಕ್ಟ್ರಾನಿಕ್ಸ್ಗೆ ಹಾಗೂ ಗುತ್ತಿಗೆದಾರರಾದ ಕುಮಾರ್ ಎಲೆಕ್ಟ್ರಾನಿಕ್ಸ್ ಮತ್ತು ಅರವಿಂದ ಎಲೆಕ್ಟ್ರಾನಿಕ್ಸ್ಗೆ ಅಕ್ರಮವಾಗಿ ಟೆಂಡರ್ ಹಂಚಿಕೆ ಮಾಡಲಾಗಿದೆ. ಈ ಮೂರು ಗುತ್ತಿಗೆದಾರ ಕಂಪನಿಗಳು ಒಂದೇ ಮನೆಯವರದ್ದಾಗಿವೆ ಎಂದು ವೇದಿಕೆಯ ಅಧ್ಯಕ್ಷ ಮೋಹನ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಜಗದೀಶ ರೆಡ್ಡಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಗುತ್ತಿಗೆ ಪಡೆದವರು ಯಾವುದೇ ಕಾಮಗಾರಿ ನಡೆಸಿಲ್ಲ. ಮಾಹಿತಿ ಹಕ್ಕು ಕಾಯ್ದೆಯಡಿ ವಿವರ ಕೇಳಿದರೆ ಅಧಿಕಾರಿಗಳು ಮಾಹಿತಿಯನ್ನೂ ನೀಡುತ್ತಿಲ್ಲ. ಅಕ್ರಮವಾಗಿ ಗುತ್ತಿಗೆ ನೀಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ವೇದಿಕೆಯ ಹರೀಶ್, ಭಗವಾನ್, ಬಸವರಾಜ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.