ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಸಹ ಯೂಟ್ಯೂಬರ್‌ಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಯೂಟ್ಯೂಬರ್ ದೀಪಕ್ ಎಂಬುವವರನ್ನು ಕಾಡಗೋಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಸಹ ಯೂಟ್ಯೂಬರ್ ಬೆದರಿಕೆ ಹಾಕಿ, ಬೈದಿದ್ದರು. ಈ ಕುರಿತು ದೀಪಕ್ ಸ್ವತಃ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ವಿಡಿಯೊ ಪೋಸ್ಟ್ ಮಾಡಿದ್ದರು. ಇದು ಜಾಲತಾಣದಲ್ಲಿ ಹರಿದಾಡಿತ್ತು.
‘ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ಪೋಸ್ಟ್ ಮಾಡಿ, ಸಾರ್ವಜನಿಕರಲ್ಲಿ ಭಯ ಉಂಟು ಮಾಡಿರುವ ದೀಪಕ್ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲು ಮಾಡಲಾಗಿದೆ’ ಎಂದು ‘ಎಕ್ಸ್’ ನಲ್ಲಿ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.