ಮಂಗಳವಾರ, ನವೆಂಬರ್ 30, 2021
22 °C

ವಿಪ್ರೊ ಜೊತೆ ಅಲಯನ್ಸ್‌ ವಿಶ್ವವಿದ್ಯಾಲಯ ಒಡಂಬಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಲಯನ್ಸ್‌ ವಿಶ್ವವಿದ್ಯಾಲಯವು ವಿಪ್ರೊ 3ಡಿ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲು ನಿರ್ಧರಿಸಿದೆ.

‘ಉದ್ಯಮಶೀಲತೆ ಆಧರಿತ ಐಒಟಿ ಕೇಂದ್ರ ಮತ್ತು ಐಡಿಇಎ ಪ್ರಯೋಗಾಲಯಗಳ ಸ್ಥಾಪನೆ ಹಾಗೂ ಕೌಶಲಾಭಿವೃದ್ಧಿ ಕಾರ್ಯಕ್ರಮಗಳ ವಿನ್ಯಾಸ ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ಈ ಒಡಂಬಡಿಕೆಗೆ ವಿಶ್ವವಿದ್ಯಾಲಯದ ಉಪ ಕುಲಪತಿ ಅನುಭಾ ಸಿಂಗ್‌ ಹಾಗೂ ವಿಪ್ರೊ 3ಡಿ ಸಂಸ್ಥೆ ಉಪಾಧ್ಯಕ್ಷ ಹಾಗೂ ಉದ್ಯಮ ವಿಭಾಗದ ಮುಖ್ಯಸ್ಥ ಅಜಯ್‌ ಪಾರಿಖ್‌ ಅವರು ಸಹಿ ಹಾಕಲಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ.

‘ಉದ್ಯಮ ಹಾಗೂ ಶೈಕ್ಷಣಿಕ ವಲಯದ ನಡುವಣ ಅಂತರವನ್ನು ಕಡಿಮೆ ಮಾಡುವುದು ಹಾಗೂ ಉದ್ಯಮಶೀಲ ಮಾನವ ಸಂಪನ್ಮೂಲ ಮತ್ತು ಸಂಶೋಧನಾ ಸಿಬ್ಬಂದಿಯನ್ನು ಸೃಷ್ಟಿಸುವುದು ಈ ಒಡಂಬಡಿಕೆಯ ಮುಖ್ಯ ಉದ್ದೇಶ’ ಎಂದು ಹೇಳಲಾಗಿದೆ.

‘ವಿದ್ಯಾರ್ಥಿಗಳನ್ನು ಡಿಜಿಟಲ್‌ ಉತ್ಪಾದನಾ ಕ್ಷೇತ್ರಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ 40 ದಿನಗಳ ತರಬೇತಿ ಕೋರ್ಸ್‌ ಆರಂಭಿಸಲಾಗುತ್ತದೆ. ವಿದ್ಯಾರ್ಥಿಗಳು 3ಡಿ ಮುದ್ರಣ ಮತ್ತು ಐಒಟಿಯನ್ನು ಕಲಿಯಲು ಈ ಕೋರ್ಸ್‌ ನೆರವಾಗಲಿದೆ. ಉದ್ಯಮಶೀಲ ಮನೋವೃತ್ತಿ ಬೆಳೆಸಲೂ ಇದು ಸಹಕಾರಿಯಾಗಲಿದೆ. ವಿದ್ಯಾರ್ಥಿಗಳಿಗೆ ನೇರ ಯೋಜನೆಗಳಲ್ಲಿ ಕೆಲಸ ಮಾಡಲೂ ಅವಕಾಶ ಕಲ್ಪಿಸಲಾಗುತ್ತದೆ’ ಎಂದೂ ವಿವರಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು