ಗುರುವಾರ , ಫೆಬ್ರವರಿ 20, 2020
30 °C

ಅಕ್ರಮವಾಗಿ ಜಮೀನು ಹಂಚಿಕೆ ಆರೋಪ: ಆರ್.ಅಶೋಕ್ ವಿರುದ್ಧ ಎಸಿಬಿ ತನಿಖೆಗೆ ಹೈಕೋರ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಗರ್ ಹುಕುಂ ಜಮೀನನ್ನು ಅಕ್ರಮವಾಗಿ ಮಂಜೂರು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಆರ್. ಅಶೋಕ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ತನಿಖೆಗೆ ಹೈಕೋರ್ಟ್ ಹಸಿರು ನಿಶಾನೆ ತೋರಿಸಿದೆ.

‘ಪ್ರಕರಣ ರದ್ದುಗೊಳಿಸಬೇಕು’ ಎಂದು ಕೋರಿ ಅಶೋಕ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಜಾ ಮಾಡಿದೆ.

‘ಈ ಪ್ರಕರಣವನ್ನು  ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ತನಿಖೆ ನಡೆಸಬಹುದು’ ಎಂಬ ಅಭಿಪ್ರಾಯವನ್ನು ನ್ಯಾಯಪೀಠ ವ್ಯಕ್ತಪಡಿಸಿದೆ.

ಏನಿದು ಪ್ರಕರಣ?:

‘ಸೋಮನಹಳ್ಳಿಯ ಎಂಟು ಎಕರೆ ಜಮೀನನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ’ ಎಂಬ ಆರೋಪವನ್ನು ಅಶೋಕ್ ಎದುರಿಸುತ್ತಿದ್ದಾರೆ.

‘ಅಶೋಕ್,  ಬೆಂಗಳೂರು ಉತ್ತರ ತಾಲ್ಲೂಕಿನ ಭೂ ಪರಿವರ್ತನೆ ಸಮಿತಿ ಅಧ್ಯಕ್ಷರಾಗಿದ್ದ ವೇಳೆ ಈ ಅಕ್ರಮ ಹಂಚಿಕೆ ನಡೆದಿದೆ’ ಎಂಬುದು ದೂರಿನ ಸಾರಂಶ.

ಈ ಹಿಂದೆ ಈ ಪ್ರಕರಣದ ತನಿಖೆಗೆ ಹೈಕೋರ್ಟ್ತ ಡೆ ನೀಡಿತ್ತು.

‘ನನ್ನ ವಿರುದ್ಧ ರಾಜಕೀಯ ದುರುದ್ದೇಶದಿಂದ ಎಫ್ಐಆರ್ ದಾಖಲು ಮಾಡಲಾಗಿದೆ’ ಎಂದು ಆಕ್ಷೇಪಿಸಿ ಅಶೋಕ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು