ಬೆಂಗಳೂರು: ಸಾರಿಗೆಯ ನಾಲ್ಕು ನಿಗಮಗಳಿಗೆ ಪ್ರಥಮ ಬಾರಿಗೆ ಕೌನ್ಸೆಲಿಂಗ್ ಮೂಲಕ ಸಿಬ್ಬಂದಿಯನ್ನು ಹಂಚಿಕೆ ಮಾಡಲಾಯಿತು.
ಮೇಲ್ವಿಚಾರಕರು, ಅಧಿಕಾರಿಗಳು ಹಾಗೂ ಕಿರಿಯ ಅಧಿಕಾರಿಗಳನ್ನು ಅವರ ಇಚ್ಛೆಯಂತೆ ಹಂಚಿಕೆ ಮಾಡಲಾಗಿದೆ. 2,525 ಅಧಿಕಾರಿಗಳಲ್ಲಿ 2,380 ಮಂದಿ ಶಾಶ್ವತ ಹಂಚಿಕೆಯಾದರು. ಉಳಿದ 145 ಅಧಿಕಾರಿಗಳಿಗೆ ಪಾರದರ್ಶಕವಾಗಿ ಮತ್ತೆ ಕೌನ್ಸೆಲಿಂಗ್ ಮಾಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮತ್ತು ಹಂಚಿಕೆ ಪ್ರಕ್ರಿಯೆಯ ಅಧಿಕಾರಯುತ ಸಮಿತಿ ಅಧ್ಯಕ್ಷರೂ ಆಗಿರುವ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ಶನಿವಾರ ಸಾಂಕೇತಿಕವಾಗಿ ತಾಂತ್ರಿಕ ಇಲಾಖೆಯ ಮೇಲ್ವಿಚಾರಕ ಸಿಬ್ಬಂದಿ ಎಂ.ಜಿ. ಮೋಗಣ್ಣಗೌಡ, ಪ್ರದೀಪ್ ಕುಮಾರ್, ಆರ್.ಎ. ಕುಪ್ಪೇಲೂರ್ ಹಾಗೂ ನಳಿನಾಕ್ಷಿ ಎನ್. ಅವರಿಗೆ ಹಂಚಿಕೆ ಪತ್ರ ವಿತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.