ಬೆಂಗಳೂರು: ನಗರದಲ್ಲಿ ಹೂವಿನ ಮಾರುಕಟ್ಟೆ ನಿರ್ಮಾಣ ಮಾಡುವ ಅವಶ್ಯಕತೆಯಿದ್ದು, ಇದಕ್ಕಾಗಿ 10 ಎಕರೆ ಸರ್ಕಾರಿ ಜಮೀನು ಮಂಜೂರು ಮಾಡಿಕೊಡಬೇಕು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಕಂದಾಯ ಸಚಿವ ಆರ್. ಅಶೋಕ ಅವರಿಗೆ ಈ ಪತ್ರ ಬರೆದಿರುವ ಸೋಮಶೇಖರ್, ‘ರಾಷ್ಟ್ರದಲ್ಲೇ ಉತ್ತಮ ಗುಣಮಟ್ಟದ ವಿವಿಧ ಹೂವುಗಳ ಪೈಕಿ ಶೇ 80ರಷ್ಟನ್ನು ನಗರದ ಹೊರವಲಯದಲ್ಲಿ ಬೆಳೆಯಲಾಗುತ್ತದೆ. ಈ ಬೆಳೆಗಾರರಿಗೆ ಮತ್ತು ಗ್ರಾಹಕರಿಗೆ ಉತ್ತಮ ಸೇವೆ ಒದಗಿಸಲು ಹೂವಿನ ಮಾರುಕಟ್ಟೆಯ ಅವಶ್ಯಕತೆ ಇದೆ’ ಎಂದು ಅವರು ಹೇಳಿದ್ದಾರೆ.

‘ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತ–ಮುತ್ತಲಿನ ಪ್ರದೇಶದಲ್ಲಿ 10 ಎಕರೆ ಜಮೀನು ನೀಡಬೇಕು’ ಎಂದು ಅವರು ಮನವಿ ಮಾಡಿದ್ದಾರೆ.ನಗರದಲ್ಲಿ ಶನಿವಾರ ನಡೆದ ಕೃಷಿ ಮಾರಾಟ ಮಂಡಳಿಯ ಪ್ರಮುಖ ಸಭೆಯಲ್ಲೂ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದ್ದು, ಹೂವು ಮಾರುಕಟ್ಟೆ ಅಭಿವೃದ್ಧಿಯ ಕುರಿತು ಪ್ರಸ್ತಾಪಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.