ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಾಹನಗಳಿಗೆ ಕಣ್ಣು ಕುಕ್ಕುವ ಎಲ್‌ಇಡಿ ದೀಪ ಅಳವಡಿಕೆ: ಪ್ರಕರಣದ ಎಚ್ಚರಿಕೆ

Published 18 ಜೂನ್ 2024, 22:30 IST
Last Updated 18 ಜೂನ್ 2024, 22:30 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಮೋಟಾರು ಕಾಯ್ದೆ(ಸಿಎಂವಿ)ಯಲ್ಲಿ ನಮೂದಿಸಿರುವ ಮಾನದಂಡದಂತೆ ವಾಹನ ಸವಾರರು ಹೆಡ್‌ಲೈಟ್ ಅಳವಡಿಕೆ ಮಾಡಿಕೊಳ್ಳಬೇಕು. ಕಾಯ್ದೆ ಉಲ್ಲಂಘಿಸಿದರೆ ಅಂತಹ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗುವುದು ಎಂದು ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ಅಲೋಕ್‌ ಕುಮಾರ್‌ ಎಚ್ಚರಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ಅಳವಡಿಸುತ್ತಿದ್ದು, ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಭಾರಿ ಗಾತ್ರದ ವಾಹನಗಳಾದ ಟ್ರಕ್‌, ಬಸ್‌ಗಳಲ್ಲಿ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ತಮ್ಮ ವಾಹನಗಳಲ್ಲಿ ಅಳವಡಿಸುತ್ತಿರುವುದರಿಂದ ಇತರೆ ವಾಹನಗಳ ಸವಾರರಿಗೆ ತೊಂದರೆ ಆಗುತ್ತಿದೆ. ಅಪಘಾತ ಪ್ರಕರಣಗಳು ಸಂಭವಿಸುತ್ತಿವೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT