ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂನ್‌ 5ಕ್ಕೆ ‘ಆಲ್ಟರ್ನೆಟಿವ್‌–23’ ಪರಿಸರ ಜಾಗೃತಿ ಕಾರ್ಯಕ್ರಮ

Published 24 ಮೇ 2023, 4:39 IST
Last Updated 24 ಮೇ 2023, 4:39 IST
ಅಕ್ಷರ ಗಾತ್ರ

ಬೆಂಗಳೂರು: ವಿಶ್ವ ಪರಿಸರ ದಿನದ ಪ್ರಯುಕ್ತ ನಗರದ ವಿಮೊವ್ ಫೌಂಡೇಷನ್ ಜೂನ್ 5ರಂದು ಬೆಳಿಗ್ಗೆ 11 ಗಂಟೆಗೆ ನ್ಯೂ ಹಾರಿಜನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ‘ಆಲ್ಟರ್ನೆಟಿವ್ 23’ (ಪರ್ಯಾಯ) ಶೀರ್ಷಿಕೆಯಡಿ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಈ ಕಾರ್ಯಕ್ರಮಗಳು ಫೌಂಡೇಷನ್‌ನ ಸಂಸ್ಥಾಪಕ ವಿನಯ್ ಶಿಂಧೆ ನೇತೃತ್ವದಲ್ಲಿ ನಡೆಯಲಿವೆ. ಆನ್‌ಲೈನ್‌ನಲ್ಲಿಯೂ ಕಾರ್ಯಕ್ರಮದ ನೇರ ಪ್ರಸಾರ ಇರಲಿದೆ. 

‘ಯುವಜನರಲ್ಲಿ ಪರಿಸರ ಕಾಳಜಿ ಉಂಟು ಮಾಡುವುದು, ದೇಶೀಯ ಉತ್ಪನ್ನಗಳನ್ನು ಪ್ರೋತ್ಸಾಹಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶ. ಸಾವಿರಕ್ಕೂ ಅಧಿಕ ಯುವಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ.  ಸಾಮಾಜಿಕ ಜಾಗೃತಿ ಮೂಡಿಸುವ ವಿಡಿಯೊವನ್ನೂ ಬಿಡುಗಡೆ ಮಾಡಲಾಗುತ್ತದೆ. 

ಪರಿಸರವಾದಿಗಳು, ಸೆಲೆಬ್ರಿಟಿಗಳು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಾರೆ’ ಎಂದು ವಿನಯ್ ಶಿಂಧೆ ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT