ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿಯಲ್ಲಿ ಕುಲಸಚಿವರಾದ ಟಿ.ಜವರೇಗೌಡ ಪ್ರಭಾರ ಕುಲಪತಿ ಪ್ರೊ.ಕೆ.ಆರ್. ಜಲಜಾ ಮತ್ತಿತರರು ಉಪಸ್ಥಿತರಿದ್ದರು.
ಬೆಸ್ಕಾಂ ಕಚೇರಿಯಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿಯಲ್ಲಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಎ.ಆರ್. ಗೋವಿಂದಸ್ವಾಮಿ ಮತ್ತಿತರರು ಹಾಜರಿದ್ದರು.
ಯಲಹಂಕ ಮತ್ತು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯಿಂದ ಕಾನ್ಶಿರಾಂ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ರಾಜ್ಯ ಸಂಯೋಜಕ ಆರ್.ಮುನಿಯಪ್ಪ ಮತ್ತಿತರರು ಭಾಗವಹಿಸಿದ್ದರು
ಬಿಬಿಎಂಪಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸಲಾಯಿತು.ಆಡಳಿತಗಾರ ಎಸ್.ಆರ್ ಉಮಾಶಂಕರ್ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು